ಕ್ವಾರಂಟೈನ್ ಉಲ್ಲಂಘನೆ ತಡೆಗೆ ವಾಚ್ ಆ್ಯಪ್

ಬುಧವಾರ, 24 ಜೂನ್ 2020 (19:34 IST)
ಹೊರಜಿಲ್ಲೆ ಹಾಗೂ ಹೊರ ರಾಜ್ಯಗಳಿಂದ ಬಂದವರಿಂದ ಕೋವಿಡ್ ಪ್ರಕರಣಗಳು ಹೆಚ್ಚಿದ್ದು, ಇದರ ನಿಯಂತ್ರಣಕ್ಕಾಗಿ ವಾಚ್ ಆ್ಯಪ್ ಮೊರೆ ಹೋಗಲಾಗಿದೆ.

ತುಮಕೂರು ಜಿಲ್ಲೆಯಲ್ಲಿ ಇದುವರೆಗೆ 15,440 ಮಂದಿಯ ಗಂಟಲು ದ್ರವ ಮಾದರಿ ಸಂಗ್ರಹಿಸಲಾಗಿದ್ದು, ಇದರಲ್ಲಿ 57 ಮಂದಿಗೆ ಕೋವಿಡ್ ದೃಢಪಟ್ಟಿದೆ ಎಂದು ಡಿಸಿ ರಾಕೇಶ್ ಕುಮಾರ್ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಜ್ವರ, ಶೀತ, ಕೆಮ್ಮು ಲಕ್ಷಣಗಳಿರುವವರಿಂದ ಗಂಟಲು ದ್ರವದ ಮಾದರಿ ಸಂಗ್ರಹಿಸಲು ಕ್ರಮ ವಹಿಸಲಾಗಿದ್ದು, ಕೋವಿಡ್ ಪ್ರಕರಣ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಕೋವಿಡ್ ತಪಾಸಣಾ ಕೇಂದ್ರವನ್ನು ತಾಲ್ಲೂಕು ಕೇಂದ್ರಗಳಲ್ಲಿ ಸ್ಥಾಪಿಸಲಾಗುತ್ತಿದೆ. ಇದರೊಂದಿಗೆ ಕೋವಿಡ್ ಕೇರ್ ಸೆಂಟರ್ ಗಳನ್ನು ಸ್ಥಾಪಿಸಲಾಗುವುದು ಎಂದರು.

ಕ್ವಾರಂಟೈನ್ ವಾಚ್ ಆ್ಯಪ್ ಮೂಲಕ ನಿಯಮಗಳನ್ನು ಉಲ್ಲಂಘಿಸುವವರ ಮೇಲೆ ನಿಗಾ ವಹಿಸಲಾಗಿದ್ದು, ಈಗಾಗಲೇ 25 ಪ್ರಕರಣಗಳನ್ನು ದಾಖಲಿಸಲಾಗಿದೆ. ಅಕ್ಕ ಪಕ್ಕದ ಮನೆಯವರಿಗೆ ನೋಟೀಸ್ ನೀಡಲಾಗುವುದು, ಕ್ವಾರಂಟೈನ್ ನಲ್ಲಿರುವವರು ನಿಯಮಗಳನ್ನು ಉಲ್ಲಂಘಿಸುತ್ತಿದ್ದರೆ ತಾಲ್ಲೂಕು ಆಡಳಿತ ಮತ್ತು ತಾಲ್ಲೂಕು ಆಡಳಿತಕ್ಕೆ ಮಾಹಿತಿ ನೀಡಬೇಕು ಎಂದಿದ್ದಾರೆ. 


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ