ಜಲವಿವಾದ ಕಾಯ್ದೆಯನ್ನು ತಿದ್ದುಪಡಿ ಮಾಡಬೇಕು

ಶನಿವಾರ, 5 ಮಾರ್ಚ್ 2022 (17:08 IST)
ಅಂತಾರಾಜ್ಯ ಜಲವಿವಾದ ಕಾಯ್ದೆಯನ್ನು ಸಂಪೂರ್ಣವಾಗಿ ತಿದ್ದುಪಡಿ ಮಾಡುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟಿದ್ದಾರೆ.
 
ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಜಲ ಜೀವನ್ ಮಿಷನ್ ಹಾಗೂ ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಗಳ ಕುರಿತಂತೆ ದಕ್ಷಿಣ ಭಾರತದ ರಾಜ್ಯಗಳ ಪ್ರಾದೇಶಿಕ ಸಮ್ಮೇಳನದಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದರು.
ಜಲ ವಿವಾದಗಳಿಗೆ ಸಂಬಂಧಿಸಿದಂತೆ ಸಂಕುಚಿತ ರಾಜಕಾರಣದ ಬದಲಿಗೆ ಹೆಚ್ಚು ಜನರಿಗೆ ನೀರು ಲಭ್ಯವಾಗಲು ಕಾಯ್ದೆಯಲ್ಲಿ ತಿದ್ದುಪಡಿ ತರಬೇಕು. ನದಿ ಪಾತ್ರಗಳ ನಿರ್ವಹಣೆ ಮಾತ್ರ ಇದಕ್ಕೆ ಪರಿಹಾರ ಎಂದು ಮುಖ್ಯಮಂತ್ರಿ ಹೇಳಿದರು.
 
ನೀರಿನಿಂದ ಸುಸ್ಥಿರ ಜೀವನೋಪಾಯ
 
ಜನರಿಗೆ ನೀರು ಒದಗಿಸುವುದು ಸರ್ಕಾರದ ಕರ್ತವ್ಯ. ನೀರಿನ ವಿಚಾರದಲ್ಲಿ ಎಲ್ಲರೂ ಒಮ್ಮತದಿಂದ ಕಾರ್ಯನಿರ್ವಹಿಸಬೇಕು. ನೀರು ಸರಬರಾಜಿನ ಮೂಲಕ ಸುಸ್ಥಿರ ಜೀವನೋಪಾಯವನ್ನು ಕಲ್ಪಿಸಲು ಸಾಧ್ಯ ಎನ್ನುವುದು ನಮ್ಮ ಪ್ರಧಾನಿಗಳ ಗುರಿಯಾಗಿದ್ದು, ಇದನ್ನು ಈಡೇರಿಸುವ ನಿಟ್ಟಿನಲ್ಲಿ ಒಟ್ಟಾಗಿ ಶ್ರಮಿಸಬೇಕು ಎಂದರು.
 
ನೀರಿನ ದುರ್ಬಳಕೆ ತಡೆಗೆ ಕ್ರಮ
 
ನೀರಾವರಿಯಲ್ಲಿ ಉನ್ನತ ಗುಣಮಟ್ಟದ ದಕ್ಷತೆಯನ್ನು ತರಲು ಪ್ರಯತ್ನ ಮಾಡಬೇಕು. ನೀರಾವರಿ ಯಲ್ಲಿ ಸಾಕಷ್ಟು ಜಲಮಾರ್ಗಗಳಲ್ಲಿ ನೀರು ದುರುಪಯೋಗವಾಗುತ್ತಿದೆ. ರಾಷ್ಟ್ರ ಮಟ್ಟದಲ್ಲಿ ನಮ್ಮ ಕಾಲುವೆಗಳ ಸಾಮರ್ಥ್ಯ ಶೇ.45ರಷ್ಟಿದೆ. ಕಾಲುವೆಗಳಲ್ಲಿ ನೀರು ಹರಿಸುವ ಸಾಮರ್ಥ್ಯದಲ್ಲಿ ಶೇ.55ರಷ್ಟು ಅಂತರವಿದೆ. ಇವುಗಳನ್ನು ಸರಿಪಡಿಸಿದರೆ ಹೆಚ್ಚಿನ ನೀರು ಲಭ್ಯವಾಗಲಿದೆ ಎಂದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ