ಬೆಂಗಳೂರು: ಕೇರಳದ ವಯಾನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 63ಕ್ಕೆ ಏರಿಕೆಯಾಗಿದ್ದು, 100ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ.
ಇದೀಗ ಕೇರಳ ಸರ್ಕಾರ ಎಲ್ಲ ರೀತಿಯ ನೆರವು ನೀಡಲು ನಾವು ಸಿದ್ದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಈ ಸಂಬಂಧ ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು, ಕೇರಳದಲ್ಲಿ ಸಂಭವಿಸಿದ ಗುಡ್ಡ ಕುಸಿತ ಅವಘಡದಲ್ಲಿ 70ಕ್ಕೂ ಅಧಿಕ ಮಂದಿ ಸಾವಿಗೀಡಾಗಿದ್ದು, ಹಲವರು ಕಣ್ಮರೆಯಾಗಿರುವ ಸುದ್ದಿ ಕೇಳಿ ಎದೆ ನಲುಗಿತು. ಇಂತಹ ಸಂಕಷ್ಟದ ಸಮಯದಲ್ಲಿ ನೆರೆಯ ಕೇರಳ ಜನರ ಜೊತೆ ನಾವು ನಿಲ್ಲಲಿದ್ದೇವೆ. ಕೇರಳಕ್ಕೆ ಅಗತ್ಯವಿರುವ ಎಲ್ಲಾ ನೆರವನ್ನು ನಮ್ಮ ಸರ್ಕಾರ ನೀಡಲಿದೆ.
ಸದ್ಯ ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಿಂದಾಗಿ 400ಕ್ಕೂ ಅಧಿಕ ಮನೆಗಳು ಹಾನಿಯಾಗಿದ್ದು, ಇದು ಕೇರಳದ ಇತಿಹಾಸದಲ್ಲಿ ನಡೆದ ಭೀಕರ ಘಟನೆ ಎನ್ನಲಾಗಿದೆ. ಇದೀಗ ನಾಪತ್ತೆಯಾದವರ ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದೆ.