ನಮ್ಮಲ್ಲಿ ಯಾವುದೇ ಒಡಕಿಲ್ಲ, ನಾವೆಲ್ಲಾ ಒಂದಾಗಿದ್ದೇವೆ: ಯಡಿಯೂರಪ್ಪ ಸ್ಪಷ್ಟನೆ
ಗುರುವಾರ, 4 ಮೇ 2017 (14:27 IST)
ನಮ್ಮಲ್ಲಿ ಯಾವುದೇ ಒಡಕಿಲ್ಲ, ನಾವೆಲ್ಲಾ ಒಂದಾಗಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ.
ನಮ್ಮಲ್ಲಿ ಯಾವುದೇ ಸಮಸ್ಯೆಗಳಿಲ್ಲ. ಪಕ್ಷದ ನಾಯಕರಲ್ಲಿ ಯಾವುದೇ ಭಿನ್ನಮತವಿಲ್ಲ. ನಾವೆಲ್ಲರು ಒಗ್ಗಟ್ಟಾಗಿದ್ದೇವೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ 150 ಸ್ಥಾನಗಳನ್ನು ಗೆಲ್ಲುವುದೇ ನಮ್ಮ ಗುರಿಯಾಗಿದೆ ಎಂದು ತಿಳಿಸಿದ್ದಾರೆ.
ಮೈಸೂರಲ್ಲಿ ಮೇ 6 ಮತ್ತು 7ರಂದು ನಡೆಯಲಿರುವ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದು, ಕಾರ್ಯಕಾರಿಣಿ ಸಭೆಯಲ್ಲಿ ಪಕ್ಷದ ವರಿಷ್ಠರು ಭಾಗಿಯಾಗಲಿದ್ದಾರೆ ಎಂದರು.
ರೈತರ ಸಾಲ ಮನ್ನಾ ಕುರಿತಂತೆ ಹೋರಾಟದ ರೂಪರೇಷೆಗಳನ್ನು ರೂಪಿಸುವ ಬಗ್ಗೆ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.