ನಾವು ಯಾವಾಗಲೂ ಒಳ್ಳೆಯದನ್ನೇ ಮಾಡುವುದು: ಹೆಗ್ಗಡೆ ಹೇಳಿಕೆಗೆ ಸಿಎಂ ಪ್ರತಿಕ್ರಿಯೆ

Sampriya

ಶುಕ್ರವಾರ, 26 ಸೆಪ್ಟಂಬರ್ 2025 (18:14 IST)
ಬೆಂಗಳೂರು: ಎಸ್‌ಐಟಿ ತನಿಖೆ ವಿಚಾರವಾಗಿ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿದ್ದಾರೆ.

ಹೆಗ್ಗಡೆಯವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ, ನಾವು ಯಾವಾಗಲೂ ಒಳ್ಳೆಯದನ್ನೇ ಮಾಡುವುದು ಎಂದಿದ್ದಾರೆ. 

ಇನ್ನೊಂದೆಡೆ ಡಿಸಿಎಂ ಡಿಕೆಶಿ ಪ್ರತಿಕ್ರಿಯಿಸಿ, ಕಾಂಗ್ರೆಸ್ ಸರ್ಕಾರ ಯಾವತ್ತಿಗೂ ಯಾರಿಗೂ ತೊಂದರೆ ಬಯಸುವುದಿಲ್ಲ.ಕಾನೂನಿನ ಚೌಕಟ್ಟಿನೊಳಗೆ ಏನು ನ್ಯಾಯ ಒದಗಿಸಬೇಕೋ ಅದನ್ನು ಮಾಡುತ್ತೇವೆ ಎಂದರು. 

ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಕಾನೂನಿನ ಪ್ರಕಾರ ಕ್ರಮವನ್ನು ವಹಿಸಲಾಗುತ್ತದೆ. ಇವತ್ತಿನವರೆಗೂ ನಾವು ಧರ್ಮಸ್ಥಳ ಪ್ರಕರಣದಲ್ಲಿ ಮಧ್ಯಪ್ರವೇಶ ಮಾಡಿಲ್ಲ.ನಾವು ಕೂಡ ಅಧಿಕಾರಿಗಳ ಬಳಿ ಏನು ಅಂತಾ ಕೇಳಿಲ್ಲ. ಇಷ್ಟು ದಿನಗಳ ಕಾಲ ಮಾಧ್ಯಮಗಳಲ್ಲಿ ಬಂದ ವರದಿ ಬಗ್ಗೆ ನಾವು ಮಾತಾಡಿದ್ದೇವೆ. ಮುಂದೆ ಅಂತಿಮವಾದ ವರದಿ ಬರಲಿ, ಆ ನಂತರ ಮಾತಾಡೋಣ ಎಂದು ಡಿಕೆಶಿ ಹೇಳಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ