ಟಿಪ್ಪು ಜಯಂತಿ ಆಚರಣೆಗೆ ವಿರೋಧವಿದೆ: ಕೆ.ಜಿ.ಬೋಪಯ್ಯ

ಬುಧವಾರ, 2 ನವೆಂಬರ್ 2016 (14:42 IST)
ಟಿಪ್ಪು ಸುಲ್ತಾನ್ ಜಯಂತಿ ಆಚರಣೆಗೆ ನಮ್ಮ ವಿರೋಧವಿದೆ. ಒಂದು ವೇಳೆ ಟಿಪ್ಪು ಜಯಂತಿ ಆಚರಣೆ ಸಂದರ್ಭದಲ್ಲಿ ಅಹಿತಕರ ಘಟನೆ ನಡೆದರೆ ಸಿಎಂ ಸಿದ್ದರಾಮಯ್ಯ ನೇರ ಹೊಣೆ ಎಂದು ಬಿಜೆಪಿ ಮುಖಂಡ ಮಾಜಿ ಸ್ಪೀಕರ್ ಕೆ.ಜಿ.ಬೋಪಯ್ಯ ಎಚ್ಚರಿಕೆ ನೀಡಿದ್ದಾರೆ.
 
ಟಿಪ್ಪು ಸುಲ್ತಾನ್ ಜಯಂತಿ ಆಚರಣೆ ವಿರೋಧಿಸಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಸರಕಾರ ಮಡಿಕೇರಿಯಲ್ಲಿ ಜಯಂತಿ ಆಚರಿಸಲು ಬಿಡುವುದಿಲ್ಲ ಎಂದು ಘೋಷಿಸಿದರು.
 
ಟಿಪ್ಪು ಸುಲ್ತಾನ್ ಮುಸ್ಲಿಂ ಎನ್ನುವ ಕಾರಣಕ್ಕೆ ವಿರೋಧಿಸುತ್ತಿಲ್ಲ. ಅವನೊಬ್ಬ ಕ್ರೂರಿ, ಮತಾಂತರವಾದಿ ಹಿಂದೂ ವಿರೋಧಿಯಾಗಿದ್ದರಿಂದ ಜಯಂತಿಯನ್ನು ವಿರೋಧಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
 
ಮಾಜಿ ಸಚಿವ ಎಚ್.ವಿಶ್ವನಾಥ್ ಮತ್ತು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಜನಾರ್ದನ ಪೂಜಾರಿಗೆ ಇದೀಗ ಬುದ್ದಿ ಬಂದಿದ್ದರಿಂದ, ಸಿಎಂ ಸಿದ್ದರಾಮಯ್ಯರನ್ನು ಟೀಕಿಸುತ್ತಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.
 
ಟಿಪ್ಪು ಸುಲ್ತಾನ್ ಕ್ರೂರಿ, ಮತಾಂತರವಾದಿ ಎನ್ನುವುದಕ್ಕೆ ದಾಖಲೆ ಕೊಡಿ ಎಂದ ಮಾಜಿ ಸಂಸದ ಎಚ್.ವಿಶ್ವನಾಥ್‌ ಹೇಳಿಕೆ ಹಿಂದೂ ವಿರೋಧಿಯಾಗಿದೆ ಎಂದು ಬಿಜೆಪಿ ವಿರಾಜಪೇಟೆ ಶಾಸಕ ಮಾಜಿ ಸ್ಪೀಕರ್ ಕೆ.ಜಿ.ಬೋಪಯ್ಯ ವಾಗ್ದಾಳಿ ನಡೆಸಿದ್ದಾರೆ.  
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ವೆಬ್ದುನಿಯಾವನ್ನು ಓದಿ