ಹೈಕಮಾಂಡ್ ನಿರ್ಧಾರಕ್ಕೆ ನಾವೆಲ್ಲ ಬದ್ಧ: ಡಿ.ಕೆ.ಶಿವಕುಮಾರ್

ಸೋಮವಾರ, 29 ಮೇ 2017 (17:06 IST)
ಪಕ್ಷದ ಕಾರ್ಯಕರ್ತರು ನನ್ನನ್ನು ಕೆಪಿಸಿಸಿ ಅಧ್ಯಕ್ಷನನ್ನಾಗಿ ಮಾಡಲು ಬಯಸಿದ್ದರು. ಆದರೆ, ಹೈಕಮಾಂಡ್ ನಿರ್ಧಾರಕ್ಕೆ ನಾವೆಲ್ಲ ಬದ್ಧ ಎಂದು ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
 
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷರನ್ನಾಗಿ ಜಿ.ಪರಮೇಶ್ವರ್ ಅವರನ್ನು ಮುಂದುವರಿಸಿದರೆ ಸಂತೋಷ. ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯೇ ಅಲ್ಲ ಎಂದು ಉಲ್ಟಾ ಹೊಡೆದಿದ್ದಾರೆ.
 
ಚುನಾವಣೆಯ ಹೊಸ್ತಿಲಲ್ಲಿರುವಾಗ ಕೆಪಿಸಿಸಿ ಅಧ್ಯಕ್ಷರನ್ನು ಬದಲಿಸುವುದರಿಂದ ಪಕ್ಷದಲ್ಲಿ ಅನಗತ್ಯವಾಗಿ ಗೊಂದಲ ಸೃಷ್ಟಿಸಿದಂತಾಗುವುದರಿಂದ ಪರಮೇಶ್ವರ್ ಮುಂದುವರಿಕೆಯೇ ಸೂಕ್ತ ಎನ್ನುವ ನಿರ್ಧಾರಕ್ಕೆ ಹೈಕಮಾಂಡ್ ಬಂದಿದೆ ಎನ್ನಲಾಗುತ್ತಿದೆ.
 
ಪರಮೇಶ್ವರ್ ಅವರನ್ನು ಬದಲಿಸಿದಲ್ಲಿ ದಲಿತ ಮತ್ತು ಹಿಂದುಳಿದ ವರ್ಗಗಳ ಮತಗಳನ್ನು ಕೂಡಾ ಕಳೆದುಕೊಳ್ಳುವ ಸಾಧ್ಯತೆಗಳ ಹಿನ್ನೆಲೆಯಲ್ಲಿ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಮುಂದುವರಿಸಲಾಗುತ್ತಿದೆ. ಆದರೆ, ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಹೈಕಮಾಂಡ್ ಆದೇಶಿಸುವ ಸಾಧ್ಯತೆಗಳಿವೆ ಎಂದು ಪಕ್ಷದ ಮೂಲಗಳು ತಿಳಿಸಿವೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ