ಹಿಟ್ಲರ್ ಪಕ್ಷ ಎಂದು ಕರೆಸಿಕೊಳ್ಳಲು ನಮಗೆ ಹೆಮ್ಮೆಯಿದೆ : ವಿಜಯೇಂದ್ರ

ಬುಧವಾರ, 8 ಮಾರ್ಚ್ 2023 (10:18 IST)
ತುಮಕೂರು : ಕಾಂಗ್ರೆಸ್ ಪಕ್ಷದವರು ಬಿಜೆಪಿಯನ್ನು ಹಿಟ್ಲರ್ ಪಕ್ಷ ಎಂದು ಟೀಕೆ ಮಾಡುತ್ತಾರೆ. ಹಾಗೆ ಕರೆಸಿಕೊಳ್ಳುವುದಕ್ಕೆ ನಮಗೆ ಹೆಮ್ಮೆಯಿದೆ ಎಂದು ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಾಂಗ್ರೆಸ್ ಪಕ್ಷಕ್ಕೆ ಟಾಂಗ್ ನೀಡಿದರು.
 
ತುಮಕೂರು ಜಿಲ್ಲೆಯ ಗುಬ್ಬಿಯಲ್ಲಿ ನಡೆದ ಬಿಜೆಪಿ ಓಬಿಸಿ ಮೋರ್ಚಾ ಸಮಾವೇಶದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಇಷ್ಟು ವರ್ಷ ಆಡಳಿತ ನಡೆಸಿದ್ದರೂ ಜಮ್ಮು ಕಾಶ್ಮೀರದಲ್ಲಿ ನಡೆಯುತ್ತಿದ್ದ ಹಿಂಸಾಚಾರವನ್ನು ತಡೆಯಲು ಆಗಲಿಲ್ಲ. ಪ್ರಧಾನಿ ಮೋದಿ ಜಮ್ಮು ಕಾಶ್ಮೀರದಲ್ಲಿ ಆರ್ಟಿಕಲ್ 370ನ್ನು ಕಿತ್ತೊಗೆಯುವ ಮೂಲಕ ತಕ್ಕ ಪಾಠ ಕಲಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ