ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯದ ವಿರುದ್ಧ ತೀರ್ಪು ಬಂದರೆ ಏನು ಮಾಡಲು ಸಾಧ್ಯ? ನಾವೇ ಕಾನೂನನ್ನು ಬದಲಾಯಿಸಲಾಗುತ್ತಾ? ಅಥವಾ ನಾವೇನು ಆಣೆಕಟ್ಟು ಕಟ್ಟೋಕ್ಕೆ ಸಾಧ್ಯವಾ ಎಂದು ಪ್ರಶ್ನಿಸಿದರು.
ಹೈದ್ರಾಬಾದ್ ಕರ್ನಾಟಕದ 6 ಜಿಲ್ಲೆಗಳಿಗೆ ಭೇಟಿ ನೀಡಿದ್ದೇನೆ. ಆ ಪ್ರದೇಶಗಳಲ್ಲಿ ವಾಡಿಕೆಯಂತೆ ಹೆಚ್ಚು ಮಳೆಯಾಗಿದೆ. ಆದರೆ, ರಾಜ್ಯದ ಇತರೆ ಭಾಗಗಳಲ್ಲಿ ಮಳೆಯ ಕೊರತೆ ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಮೋಡ ಬಿತ್ತನೆಗೆ ಸರಕಾರ ಚಿಂತಿಸುತ್ತಿದೆ ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ತಿಳಿಸಿದ್ದಾರೆ.