ಶಾಸಕ ರಾಜು ಕಾಗೆ ನಮ್ಮ ಸಂಪರ್ಕಕ್ಕೂ ಸಿಗುತ್ತಿಲ್ಲ: ಜಗದೀಶ್ ಶೆಟ್ಟರ್

ಮಂಗಳವಾರ, 17 ಜನವರಿ 2017 (18:25 IST)
ಕಾಂಗ್ರೆಸ್ ಮುಖಂಡ ವಿವೇಕ್ ಶೆಟ್ಟಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಶಾಸಕ ರಾಜು ಕಾಗೆ ಎಲ್ಲಿದ್ದಾರೆಂಬುದು ಗೊತ್ತಿಲ್ಲ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಹೇಳಿದರು.
 
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ ರಾಜು ಕಾಗೆ ಸಂಪರ್ಕಕ್ಕೆ ಸಿಗುತ್ತಿಲ್ಲ. ಕಾಗೆ ಸಾರ್ವಜನಿಕರ ಮುಂದೆ ಬಂದ ಮೇಲೆ ಪಕ್ಷದಿಂದ ಸ್ಪಷ್ಟೀಕರಣ ಕೇಳಲಾಗುತ್ತೆ. ರಾಜ್ಯದಲ್ಲಿ ನಮ್ಮ ಸರಕಾರ ಅಧಿಕಾರದಲ್ಲಿ ಇಲ್ಲ. ಹೀಗಾಗಿ ಶಾಸಕರನ್ನು ರಕ್ಷಿಸುವ ಕೆಲಸ ಮಾಡುತ್ತಿಲ್ಲ. ಕಾಂಗ್ರೆಸ್ ಮುಖಂಡ ವಿವೇಕ್ ಶೆಟ್ಟಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪ ಶಾಸಕ ರಾಜು ಕಾಗೆ ವಿರುದ್ಧ ರಾಜ್ಯ ಸರಕಾರ ಸೂಕ್ತ ಕ್ರಮ ಕೈಗೊಳ್ಳಲಿ ಎಂದು ಹೇಳಿದರು. 
 
ಫೇಸ್‌ಬುಕ್‌ನಲ್ಲಿ ಕೆಟ್ಟದಾಗಿ ಕಮೆಂಟ್ ಮಾಡಿದ್ದಕ್ಕೆ ಕಾಂಗ್ರೆಸ್ ನಾಯಕನ ಮನೆಗೆ ನುಗ್ಗಿ ಬಿಜೆಪಿ ಶಾಸಕ ರಾಜು ಕಾಗೆ ಪುತ್ರಿ ಹಾಗೂ ಟೀಂ ಡೆಡ್ಲಿ ಅಟ್ಯಾಕ್ ಮಾಡಿದ ಘೋರ ಕೃತ್ಯ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಉಗಾರ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿತ್ತು. 
 
ಬೆಳಗಾವಿ ಜಿಲ್ಲೆಯ ಕಾಗವಾಡ ಕ್ಷೇತ್ರದ ಶಾಸಕ ರಾಜು ಕಾಗೆ ಅವರ ರೌಡಿ ಗ್ಯಾಂಗ್, ಫೇಸ್‌ಬುಕ್‌ನಲ್ಲಿ ಕಮೆಂಟ್ ಮಾಡಿದ್ದ ಕಾಂಗ್ರೆಸ್ ನಾಯಕ ವಿವೇಕ ಶೆಟ್ಟಿ ಮನೆಗೆ ನುಗ್ಗಿ ಮಹಿಳೆ ಮಕ್ಕಳು ಎನ್ನುವುದನ್ನು ನೋಡದೆ ಅಟ್ಟಹಾಸ ಮೆರೆದಿದ್ದು, ಈ ಭೀಭತ್ಸ ಕೃತ್ಯದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದವು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ