ಮೈತ್ರಿ ಧರ್ಮವನ್ನು ನಾವು ಪಾಲಿಸುತ್ತೇವೆ-ದೇವೇಗೌಡ

geetha

ಸೋಮವಾರ, 4 ಮಾರ್ಚ್ 2024 (21:00 IST)
ಬೆಂಗಳೂರು-ಜೆ.ಪಿ.ಭವನದಲ್ಲಿ ಸೋಮವಾರ ರಾಜ್ಯ ಜೆಡಿಎಸ್‌ನ ಮಹಿಳಾ ಘಟಕದ ಅಧ್ಯಕ್ಷೆಯಾಗಿ ರಶ್ಮಿ ರಾಮೇಗೌಡ ಅವರು ಅಧಿಕಾರ ಸ್ವೀಕರಿಸಿದ ಕಾರ್ಯಕ್ರಮದಲ್ಲಿ ಭಾಗಿಯಾದ ನಂತರ ದೇವೇಗೌಡ ಮಾಧ್ಯಮಗಳ ಜತೆ ಮಾತನಾಡಿದರು.ಮೈತ್ರಿ ಧರ್ಮವನ್ನು ನಾವು ಪಾಲಿಸುತ್ತೇವೆ. ಎಲ್ಲ ಕ್ಷೇತ್ರಗಳನ್ನು ಗೆಲ್ಲುವುದಕ್ಕೆ ಬಿಜೆಪಿ ಜತೆ ಸೇರಿ ಕೆಲಸ ಮಾಡುತ್ತೇವೆ ಎಂದರು.
 
ಜೆಡಿಎಸ್ ಮತ್ತು ಬಿಜೆಪಿ ನಡುವೆ ಕ್ಷೇತ್ರ ಹಂಚಿಕೆ ಅಂತಿಮ ಹಂತದಲ್ಲಿದ್ದು, ಬಹುಶಃ ಒಂದು ವಾರದೊಳಗೆ ಎಲ್ಲ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಸೀಟು ಹಂಚಿಕೆ ವಿಚಾರದ ಬಗ್ಗೆ ಈಗಾಗಲೇ ಬಿಜೆಪಿ ನಾಯಕರ ಜತೆ ಕುಮಾರಸ್ವಾಮಿ ಮಾತುಕತೆ ನಡೆಸಿದ್ದಾರೆ. ಬಹುಶಃ ಇನ್ನೊಮ್ಮೆ ಕೂತು ಚರ್ಚೆ ಮಾಡಿದರೆ ಅಲ್ಲಿಗೆ ಎಲ್ಲ ಅಂತಿಮ ಆಗುತ್ತದೆ ಎಂದು ದೇವೇಗೌಡ ತಿಳಿಸಿದರು.
 
ಕುಮಾರಸ್ವಾಮಿ ಅವರು ರಾಷ್ಟ್ರ ರಾಜಕಾರಣಕ್ಕೆ ಹೋಗುತ್ತಾರೆಯೇ ಎನ್ನುವ ಮತ್ತೊಂದು ಪ್ರಶ್ನೆಗೆ, ಇನ್ನೊಂದು ವಾರದಲ್ಲಿ ಸೀಟು ಹಂಚಿಕೆ ಬಗ್ಗೆ ತೀರ್ಮಾನ ಆಗುತ್ತದೆ. ಜೆಡಿಎಸ್‌ಗೆ ಯಾವ ಯಾವ ಕ್ಷೇತ್ರ ಎನ್ನುವುದು ಮೋದಿ, ಅಮಿತ್ ಶಾ, ನಡ್ಡಾ, ಕುಮಾರಸ್ವಾಮಿ ಅವರು ಸಮಾಲೋಚನೆ ಮಾಡುತ್ತಾರೆ. ಅಲ್ಲಿ ಅವರು ಸ್ಪರ್ಧೆ ಮಾಡಬೇಕೆ? ಬೇಡವೆ? ಎನ್ನುವ ಅಂಶವನ್ನು ಚರ್ಚೆ ಮಾಡಿ ನಿರ್ಧಾರ ಮಾಡುತ್ತಾರೆ ಎಂದು ದೇವೇಗೌಡ ತಿಳಿಸಿದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ