ಜನತಾ ದಳ ಮತ್ತು ಕಾಂಗ್ರೆಸ್ ಕಳೆದ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡ ಪರಿಣಾಮ ಬಿಜೆಪಿಗೆ ಲಾಭವಾಗಿತ್ತು. ಈ ಬಾರಿ ಜನತಾದಳ ಪಕ್ಷವು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವುದರಿಂದ ಕಾಂಗ್ರೆಸ್ ಪಕ್ಷಕ್ಕೆ ನೇರವಾಗಿ ಲಾಭವಾಗಲಿದೆ ಎಂದು ನುಡಿದ ಬೈರತಿ ಸುರೇಶ್, ಕಾಂಗ್ರೆಸ್ ಸರ್ಕಾರ ಬಂದಾಗಿನಿಂದಲೂ ಬಿಜೆಪಿಯವರು ಇದು ಬಿದ್ದುಹೋಗುತ್ತದೆ ಎನ್ನುತ್ತಿದ್ದಾರೆ. ಬಿಜೆಪಿಯವರು ಹೇಳುವುದೆಲ್ಲ ಅಪ್ಪಟ ಸುಳ್ಳು ಎಂದರು.
ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿಗೆ ಮರಳಿದ್ದರಿಂದ ನಮಗೆ ಯಾವುದೇ ನಷ್ಟವಿಲ್ಲ ಎಂದು ಸಚಿವ ಬೈರತಿ ಸುರೇಶ್ ಹೇಳಿದ್ದಾರೆ. ಅಭಿವೃದ್ಧಿ, ಉದ್ಯೋಗ ಸೃಷ್ಟಿ, ಆರ್ಥಿಕ ಬೆಳವಣಿಗರ,ಮಹಿಳಾ ಸುರಕ್ಷತೆ ಬಗ್ಗೆ ಮಾತನಾಡಿ ಮತ ಕೇಳಬೇಕೇ ಹೊರತು, ಮಂದಿರ ಮಸೀದಿ ಎಂದು ಹೇಳಿ ಧಾರ್ಮಿಕ ಭಾವನೆ ಕೆರಳಿಸೋದು ಬಿಡಬೇಕು ಎಂದು ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದ ಬೈರತಿ ಸುರೇಶ್, ನಮ್ಮ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಿಂದ ಜನರ ಕಣ್ಣಲ್ಲಿ ಹೊಳಪು ಕಾಣುತಿದ್ದೇವೆ. ಲೋಕಸಭಾ ಚುನಾವಣೆಯಲ್ಲಿ 15-20 ಸ್ಥಾನಗಳನ್ನು ಕಾಂಗ್ರೆಸ್ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.