ಮೈತ್ರಿಯ ಕಹಿ ಅನುಭವ ನೋಡಿದ್ದೇವೆ
ಲೋಕಸಭಾ ಚುನಾವಣೆಗೆ ಜೆಡಿಎಸ್-ಬಿಜೆಪಿ ಮೈತ್ರಿ ವಿಚಾರಕ್ಕೆ ಸಚಿವ ದಿನೇಶ್ ಗುಂಡೂರಾವ್ ಲೇವಡಿ ಮಾಡಿದ್ದಾರೆ. ರಾಮನಗರದಲ್ಲಿ ಮಾತನಾಡಿದ ಅವರು, ನಾವು ಹಿಂದೆ ಮೈತ್ರಿ ಮಾಡಿ ಅನುಭವಿಸಿದ್ದೇವೆ. ನಮಗೆ ಆ ಮೈತ್ರಿ ಬೇಡ ಅಂತ ದೂರ ಉಳಿದಿದ್ದೇವೆ. ಹಿಂದೆ ಮೈತ್ರಿಯ ಕಹಿ ಅನುಭವ ನೋಡಿದ್ದೇವೆ. ಈಗ ಮೈತ್ರಿ ಮಾಡಿಕೊಂಡಿರುವವರು ಅನುಭವಿಸಲಿದ್ದಾರೆ. ಈ ಮೈತ್ರಿ ಜೆಡಿಎಸ್ ಪಕ್ಷದ ಕೊನೆ ಹಂತ ಎನ್ನಬಹುದು ಎಂದು ಭವಿಷ್ಯ ನುಡಿದರು.