ತಿನ್ನುವ ಹಕ್ಕು ನಮಗಿದೆ, ಬಿಸಾಡುವ ಹಕ್ಕು ನಮಗಿಲ್ಲ- ಕೆ.ಎಚ್. ಮುನಿಯಪ್ಪ
ರಾಷ್ಟ್ರ ಮತ್ತು ರಾಜ್ಯದಲ್ಲಿ ಮೂರನೇ ಒಂದು ಭಾಗದಷ್ಟು ತಯಾರಾದ ಆಹಾರ ವ್ಯರ್ಥವಾಗುತ್ತಿದ್ದು, ತಿನ್ನುವ ಹಕ್ಕು ನಮಗಿದೆ ಆದರೆ ಬಿಸಾಡುವ ಹಕ್ಕು ನಮಗಿಲ್ಲ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ಅವರು ಸಾರ್ವಜನಿಕರಿಗೆ ಕರೆ ನೀಡಿದರು. ಸ್ಕೌಟ್ ಅಂಡ್ ಗೈಡ್ಸ್ ಮೈದಾನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ದಸರಾ ಆಹಾರ ಮೇಳ ಕಾರ್ಯಕ್ರಮವನ್ನು ಸೌದೆ ಒಲೆಯ ಮೇಲೆ ಮಡಿಕೆಯಲ್ಲಿ ಹಾಲು ಉಕ್ಕಿಸುವ ಮೂಲಕ ದಸರಾ ಆಹಾರ ಮೇಳಕ್ಕೆ ಚಾಲನೆ ನೀಡಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ರು.