ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸುಪ್ರೀಂ ಆದೇಶ ಪಾಲಿಸುವುದು ಅನಿವಾರ್ಯವಾಗಿದೆ. ಬಹಳ ಸುಕ್ಷ್ಮವಾಗಿ ಪರಿಸ್ಥಿತಿಯನ್ನು ಎದುರಿಸಬೇಕಾಗಿದೆ. ನಾವು ನಮ್ಮ ರೈತರ ಹಿತ ಕಾಯಬೇಕು. ಕುಡಿಯುವ ನೀರಿನ ಜೊತೆಗೆ ರೈತರ ಬೆಳೆಗೂ ನೀರು ನೀಡಬೇಕು. ಹೀಗಾಗಿ ಕಾನೂನಿಗೆ ಧಕ್ಕೆಯಾಗದಂತೆ ಸರ್ವಾನುಮತದ ನಿರ್ಣಯ ಕೈಗೊಳ್ಳಬೇಕಿದೆ ಎಂದು ಹೇಳಿದರು.
ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು ಬಿಡುವಂತೆ ಸುಪ್ರೀಕೋರ್ಟ್ ಆದೇಶ ನೀಡಿದೆ. ಆದರೆ, ಕರ್ನಾಟಕ ಸರಕಾರ ಸುಪ್ರೀಂ ಆದೇಶವನ್ನು ಪಾಲಿಸದೇ ನ್ಯಾಯಾಲಯಕ್ಕೆ ಅಗೌರವ ತೋರಿದೆ. ಹೀಗಾಗಿ ತಮಿಳುನಾಡಿಗೆ ನೀರು ಬಿಡಲೇಬೇಕು. ಇಲ್ಲದಿದ್ದರೇ ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದು ಸೆ.30 ರಂದು ಸುಪ್ರೀಂಕೋರ್ಟ್ ಎಚ್ಚರಿಕೆ ನೀಡಿತ್ತು.