ಜನತೆಯ ತೀರ್ಪನ್ನು ಒಪ್ಪಿಕೊಳ್ಳುತ್ತೇವೆ : ಸಿಎಂ ಸಿದ್ದರಾಮಯ್ಯ

ಮಂಗಳವಾರ, 16 ಫೆಬ್ರವರಿ 2016 (11:27 IST)
ಹೆಬ್ಬಾಳದಲ್ಲಿ ನಾವು ಗೆಲ್ಲುತ್ತೇವೆಂದು ಭಾವಿಸಿದ್ದೆವು. ಆದರೆ ನಮ್ಮ ನಿರೀಕ್ಷೆಯಂತೆ ಆಗಲಿಲ್ಲ. ಕೊನೆ ಕ್ಷಣದಲ್ಲಿ ಅಭ್ಯರ್ಥಿಯನ್ನು ನಿಲ್ಲಿಸಿರುವುದು ಅದಕ್ಕೆ ಕಾರಣವಿರಬಹುದು. ಏನೇ ಆದರೂ ಜನರ ತೀರ್ಪನ್ನು ನಾವು ಒಪ್ಪಿಕೊಳ್ಳುತ್ತೇವೆ. ಬೀದರ್‌‍ನಲ್ಲಿ ನಾವು ನಿರೀಕ್ಷಿಸಿದಂತೆ ಫಲಿತಾಂಶ ಗಳಿಸುತ್ತಿದ್ದೇವೆ ಎಂದು ವಿಧಾನಸಭೆ ಉಪಚುನಾವಣೆ ಮತಎಣಿಕೆ ಫಲಿತಾಂಶ ಕುರಿತು  ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ಬೀದರ್‌ನಲ್ಲಿ ಕಾಂಗ್ರೆಸ್ ಪಕ್ಷ ಗೆಲುವಿನತ್ತ ದಾಪುಗಾಲು ಹಾಕಿದ್ದು, 13ನೇ ಸುತ್ತಿನ ಮತಎಣಿಕೆ ಬಳಿಕ ಕಾಂಗ್ರೆಸ್ ಪಕ್ಷದ ರಹೀಂ ಖಾನ್ ಭಾರೀ ಮುನ್ನಡೆ ಗಳಿಸಿದ್ದು, 21,124 ಮತಗಳ ಮುನ್ನಡೆ ಸಾಧಿಸಿದ್ದಾರೆ. ಇದರಿಂದ ಬೀದರ್ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಕಟ್ಟಿಟ್ಟ ಬುತ್ತಿಯಾಗಿದ್ದು, ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ಮುಳುಗಿದ್ದಾರೆ.

ಬೀದರ್‌ನಲ್ಲಿ  ರಹೀಂ ಖಾನ್ 44704ಪ್ರಕಾಶ್ ಖಂಡ್ರೆ 23, 624 ಮತಗಳು ಮತ್ತು  ಮೊಹ್ಮದ್ ಆಯಾಜ್ 2544 ಮತಗಳನ್ನು ಗಳಿಸಿದ್ದಾರೆ.  ಹೆಬ್ಬಾಳದಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ಮುಳುಗಿದ್ದು, ಬಿಜೆಪಿಯ ವೈ.ಎ. ನಾರಾಯಣಸ್ವಾಮಿ ಗೆಲುವಿನತ್ತ ದಾಪುಗಾಲು ಹಾಕಿದ್ದಾರೆ.  ಎರಡು ಬಾರಿ ವಿಧಾನಪರಿಷತ್ತಿಗೆ ಆಯ್ಕೆಯಾಗಿದ್ದ ನಾರಾಯಣ ಸ್ವಾಮಿ ಈಗ ವಿಧಾನಸಭೆಗೆ ಆಯ್ಕೆಯಾಗಲಿದ್ದಾರೆ.

ವೆಬ್ದುನಿಯಾವನ್ನು ಓದಿ