ಸಿಎಂ ಸಿದ್ದರಾಮಯ್ಯ ನಾಯಕತ್ವದಲ್ಲಿ ಚುನಾವಣೆ ಎದುರಿಸುತ್ತೇವೆ: ಸಚಿವ ಅಂಜನೇಯ

ಮಂಗಳವಾರ, 16 ಮೇ 2017 (17:36 IST)
ಮುಂದಿನ ಚುನಾವಣೆಯನ್ನು ಸಿಎಂ ಸಿದ್ದರಾಮಯ್ಯ ನಾಯಕತ್ವದಲ್ಲಿ ಎದುರಿಸುತ್ತೇವೆ ಎಂದು ಸಚಿವ ಎಚ್.ಅಂಜನೇಯ ಹೇಳಿದ್ದಾರೆ.
 
ಕಾಂಗ್ರೆಸ್ ಪಕ್ಷ ಸರ್ವಜನಾಂಗ ಪಕ್ಷ. ದೇಶದಲ್ಲಿ ಯಾವುದೇ ಸರಕಾರ ಕೊಡಲಾರದಿರುವುದನ್ನು ನಮ್ಮ ಸರಕಾರ ರಾಜ್ಯದ ಜನತೆಗೆ ನೀಡಿದೆ. ಸಿಎಂ ಸಿದ್ದರಾಮಯ್ಯ ನಮ್ಮ ನಾಯಕರು. ಅವರ ನೇತೃತ್ವದಲ್ಲಿ ಚುನಾವಣೆಗೆ ಹೋಗುತ್ತೇವೆ ಎಂದು ತಿಳಿಸಿದ್ದಾರೆ. 
 
ಜನರಿಗೆ ಅನುಕೂಲವಾಗುವಂತಹ ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ. ಪಾರದರ್ಶಕ ಅಡಳಿತ, ಜನಪರ, ರೈತಪರ ಕಾಳಜಿಯಿಂದಾಗಿ ಜನತೆ ಮತ್ತೊಮ್ಮೆ ಆಶೀರ್ವದಿಸಲಿದ್ದಾರೆ ಎಂದು ಮಾಜ ಕಲ್ಯಾಣ ಖಾತೆ ಸಚಿವ ಎಚ್.ಅಂಜನೇಯ ವಿಶ್ವಾಸ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ