ಲೋಕಸಭಾ ಗೆಲುವಿಗೆ BYV ಜೊತೆ ಕೈಗೊಡಿಸುವೆ
ಲೋಕಸಭಾ ಚುನಾವಣೆಯಲ್ಲಿ 28 ಸ್ಥಾನಗಳನ್ನು ಗೆಲ್ಲಲು ನೂತನ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಜತೆ ಕೈ ಜೋಡಿಸುವುದಾಗಿ ಶಾಸಕ ಎಸ್.ಆರ್.ವಿಶ್ವನಾಥ್ ಹೇಳಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ 28ಕ್ಕೆ 28 ಸ್ಥಾನಗಳನ್ನು ಗೆಲ್ಲಬೇಕೆಂದು ಸಿದ್ದತೆಗಳನ್ನು ಮಾಡಲಾಗುತ್ತಿದೆ. ಈಗ ವಿಜಯೇಂದ್ರ ನೂತನ ರಾಜ್ಯಾಧ್ಯಕ್ಷರಾಗಿರುವುದರಿಂದ ಪಕ್ಷದ ಕಾರ್ಯಕರ್ತರಲ್ಲೂ ಉತ್ಸಾಹ ಹೆಚ್ಚಿದೆ.
ಲೋಕಸಭೆ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಗಳಿಸುವುದಕ್ಕೆ ಪೂರಕವಾಗಿ ಕಾರ್ಯತಂತ್ರಗಳನ್ನು ರೂಪಿಸಲಾಗುತ್ತಿದೆ. ಅದಕ್ಕೆ ಪೂರಕವಾಗಿ ವಿಜಯೇಂದ್ರ ಸಹ ಈಗಾಗಲೇ ರಾಜ್ಯ ಪ್ರವಾಸ ಶುರು ಮಾಡಿದ್ದಾರೆ. ಅವರಿಗೆ ಎಲ್ಲ ಶಾಸಕರು ಮತ್ತು ಕಾರ್ಯಕರ್ತರು ಸಹಕಾರ ನೀಡುತ್ತಾರೆ ಎಂದು ವಿಶ್ವನಾಥ್ ವಿಶ್ವಾಸ ವ್ಯಕ್ತಪಡಿಸಿದರು.