ತಮಿಳುನಾಡಿಗೆ ನೀರು ಬಿಡಲು ನಿರಾಕರಿಸಿದ ಕರ್ನಾಟಕ

ಶುಕ್ರವಾರ, 17 ಫೆಬ್ರವರಿ 2017 (15:42 IST)
ಕಾವೇರಿ ಜಲಾನಯನದಲ್ಲಿ ಕುಡಿಯುವ ನೀರಿಗೆ ಕೊರತೆಯಿರುವ ಹಿನ್ನೆಲೆಯಲ್ಲಿ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ ಎಂದು ಕರ್ನಾಟಕ ಸರಕಾರ ತಳ್ಳಿಹಾಕಿದೆ.
 
ನೀರು ಹಂಚಿಕೆ ಕುರಿತು ನಡೆದ ಮೇಲುಸ್ತುವಾರಿ ಸಭೆಯಲ್ಲಿ ಕರ್ನಾಟಕಕ್ಕೆ ಕುಡಿಯುವ ನೀರಿಗಾಗಿ ಇನ್ನೂ 3 ಟಿಎಂಸಿ ನೀರಿನ ಕೊರತೆಯಿರುವುದರಿಂದ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಾಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ.
 
ಹಿಂದಿನ ಬಾಕಿಯಾದ 13 ಟಿಎಂಸಿ ನೀರನ್ನು ಬಿಡಲೇಬೇಕು ಎಂದು ತಮಿಳುನಾಡು ಅಧಿಕಾರಿಗಳು ರಾಜ್ಯ ಸರಕಾರದ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ,ಯಾವುದೇ ಕಾರಣಕ್ಕೂ ನೀರು ಬಿಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸರಕಾರ ನಿರಾಕರಿಸಿದೆ.
 
ಸುಪ್ರೀಂಕೋರ್ಟ್ ಪ್ರತಿದಿನ 2 ಸಾವಿರ ಕ್ಯೂಸೆಕ್ಸ್ ನೀರು ಹರಿಸುವಂತೆ ಆದೇಶಿಸಿತ್ತು. ಅದರಂತೆ ನೀರು ಹರಿಸಲಾಗಿದೆ. ಇದೀಗ ಸರಕಾರ ಸುಪ್ರೀಂಕೋರ್ಟ್‌ನಲ್ಲಿ ಮಧ್ಯಂತರ ಅರ್ಜಿ ಸಲ್ಲಿಸಿದ್ದು, ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ ಎಂದು ಅರ್ಜಿಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ