ತಮಿಳುನಾಡಿಗೆ ಕಾವೇರಿ ನೀರು ಬಿಡಲು ಸಾಧ್ಯವಿಲ್ಲ: ಯಡಿಯೂರಪ್ಪ

ಬುಧವಾರ, 22 ಮಾರ್ಚ್ 2017 (14:42 IST)
ಕಾವೇರಿ ಕಣಿವೆಯ ಡ್ಯಾಂಗಳಲ್ಲಿ ನೀರಿನ ಕೊರತೆಯಿರುವುದರಿಂದ ನೆರೆಯ ರಾಜ್ಯವಾದ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
 
ಸುಪ್ರೀಂಕೋರ್ಟ್ ತಮಿಳುನಾಡಿಗೆ ಪ್ರತಿನಿತ್ಯ ಎರಡು ಸಾವಿರ ಕ್ಯೂಸೆಕ್ಸ್ ನೀರು ಬಿಡುವಂತೆ ಆದೇಶ ನೀಡಿದೆ. ಆದರೆ, ಡ್ಯಾಂಗಳಲ್ಲಿ ಕುಡಿಯುವ ನೀರಿಗೆ ಕೊರತೆಯಿರುವಾಗ ನೀರಾವರಿಗೆ ಹೇಗೆ ನೀರು ಬಿಡಲು ಸಾಧ್ಯ ಎಂದು ಪ್ರಶ್ನಿಸಿದರು.
 
ರಾಜ್ಯ ಸರಕಾರ ಸುಪ್ರೀಂಕೋರ್ಟ್‌ನಲ್ಲಿ ನಿಖರವಾದ ಅಂಕಿ ಅಂಶಗಳನ್ನು ನೀಡುವಲ್ಲಿ ವಿಫಲವಾಗಿದೆ. ರಾಜ್ಯ ಸರಕಾರದ ವೈಫಲ್ಯದಿಂದಲೇ ಸುಪ್ರೀಂಕೋರ್ಟ್‌ನಿಂದ ಇಂತಹ ತೀರ್ಪು ಬಂದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
 
ಸಿಎಂ  ಸಿದ್ದರಾಮಯ್ಯ ನೇತೃತ್ವದ ಸರಕಾರಕ್ಕೆ ರಾಜ್ಯದ ಅಭಿವೃದ್ಧಿಯ ಬಗ್ಗೆ ಆಸಕ್ತಿಯಿಲ್ಲ. ಆದ್ದರಿಂದಲೇ ಕಾವೇರಿ, ಮಹಾದಾಯಿ ಮತ್ತು ಎತ್ತಿನಹೊಳೆಯಂತಹ ಯೋಜನೆಗಳು ನೆನೆಗುದಿಗೆ ಬಿದ್ದಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಗುಡುಗಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ