ಕಮ್ಯೂನಲ್ ಗೂಂಡಾಗಿರಿಯನ್ನು ಸಹಿಸಲಾಗಲ್ಲ: ಸಿಎಂ ಸಿದ್ದರಾಮಯ್ಯ

ಶನಿವಾರ, 19 ನವೆಂಬರ್ 2016 (15:19 IST)
ಮಂಗಳೂರಿನಲ್ಲಿ ಪದೇ ಪದೇ ಚೂರಿ ಇರಿತ ಪ್ರಕರಣಗಳಿಗೆ ಸಂಬಂಧಿಸಿದಂತೆ ದುಷ್ಕರ್ಮಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದೇನೆ. ಎಂದಿಗೂ ಸಹ ಕಮ್ಯೂನಲ್ ಗೂಂಡಾಗಿರಿಯನ್ನು ಸಹಿಸಲಾಗಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.  
 
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಪ್ಪು ಹಣ ತಡೆಗಟ್ಟಲು ಏಕಾಏಕಿ 500, 1000 ಮುಖಬೆಲೆಯ ನೋಟ್ ಬ್ಯಾನ್ ಮಾಡಿರುವುದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದೆ. ಯಾವುದೇ ಎಟಿಎಂ ಕೇಂದ್ರದ ಬಳಿ ಶ್ರೀಮಂತರ ಕ್ಯೂ ಕಾಣಿಸುತ್ತಿಲ್ಲ. ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡು ನೋಟ್ ಬ್ಯಾನ್ ಮಾಡಬೇಕಿತ್ತು. ನಮ್ಮ ಬಳಿ ಅಧಿಕಾರವಿದ್ದರೆ ಈ ಸಮಸ್ಯೆಯನ್ನು ಬಗೆಹರಿಸುತ್ತಿದ್ದೇವು ಎಂದು ಹೇಳಿದರು. 
 
ತನ್ವೀರ್ ಸೇಠ್ ಅಶ್ಲೀಲ ಚಿತ್ರ ವೀಕ್ಷಣೆ ಪ್ರಕರಣ.....
 
ರಾಜ್ಯ ಸರಕಾರ ಆಯೋಜಿತ ಟಿಪ್ಪು ಸುಲ್ತಾನ್ ಜಯಂತಿ ಕಾರ್ಯಕ್ರಮದಲ್ಲಿ ಶಿಕ್ಷಣ ಸಚಿವ ತನ್ವೀರ್ ಸೇಠ್ ಯುವತಿಯರ ಅರೆನಗ್ನ ಚಿತ್ರ ವೀಕ್ಷಣೆ ಪ್ರಕರಣವನ್ನು ಸಿಐಡಿ ಅಧಿಕಾರಿಗಳಿಗೆ ವಹಿಸಿದ್ದೇನೆ. ತನಿಖಾ ವರದಿ ಬಂದ ಬಳಿಕ ಸೂಕ್ತ ಕ್ರಮ ಕೈಗೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ