ದಕ್ಷಿಣ ಕನ್ನಡ, ಉಡುಪಿಯಲ್ಲಿ 10 ಸ್ಥಾನ ಗೆಲ್ಲುತ್ತೇವೆ: ಡಿಕೆಶಿ ಭವಿಷ್ಯ

ಶನಿವಾರ, 11 ಫೆಬ್ರವರಿ 2023 (19:39 IST)
ಕಾಂಗ್ರೆಸ್ ಆಂತರಿಕ ಸಮೀಕ್ಷೆ ಪ್ರಕಾರ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯಲ್ಲಿ ಕಾಂಗ್ರೆಸ್‌ 10 ಸ್ಥಾನ ಗೆಲ್ಲುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಅವರು ಭವಿಷ್ಯ ನುಡಿದಿದ್ದಾರೆ.ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ಕರಾವಳಿಯಲ್ಲಿ ನಮ್ಮದೇ ಆಂತರಿಕ ಸಮೀಕ್ಷೆ ನಡೆಸಲಾಗಿದೆ. ಸಮೀಕ್ಷೆ ಪ್ರಕಾರ ಈ ಎರಡು ಜಿಲ್ಲೆಗಳಲ್ಲಿ 10 ಸ್ಥಾನ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತ ಪಡಿಸಿದ್ರು.ಇನ್ನು ಇದೆ ವೇಳೆ ಮಂಗಳೂರು ಭಾಗದಲ್ಲಿ ಕೇಂದ್ರ ಸಚಿವ ಅಮಿತ್ ಶಾ ಪ್ರಚಾರ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಅಮಿತ್ ಶಾ ಪುತ್ತೂರಿನಲ್ಲಿ ರೋಡ್ ಶೋ ಮಾಡಬೇಕಿತ್ತು. ಆದರೆ ಪುತ್ತೂರು ರೋಡ್ ಶೋ ಕ್ಯಾನ್ಸಲ್ ಮಾಡಿಕೊಂಡಿದ್ದಾರೆ. ಅಮಿತ್ ಶಾಗೆ ಕಾನೂನು ಸುವ್ಯವಸ್ಥೆ ಸಮಸ್ಯೆ ಇದೆ ಅನ್ನುತ್ತಿದ್ದಾರೆ. ಹಾಗಾದರೆ ಸಾಮಾನ್ಯ ಜನರ ಪರಿಸ್ಥಿತಿ ಏನಿರಬಹುದು ಬಿಜೆಪಿ ವಿರುದ್ಧ ಕಿಡಿ ಕರಿದ್ರು

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ