ಎರಡೂ ಕ್ಷೇತ್ರಗಳಲ್ಲಿ 100ಕ್ಕೆ ನೂರರಷ್ಟು ಗೆಲ್ಲುತ್ತೇವೆ: ಯಡಿಯೂರಪ್ಪ

ಗುರುವಾರ, 9 ಮಾರ್ಚ್ 2017 (14:11 IST)
ರಾಜ್ಯದಲ್ಲಿ ಬಿಜೆಪಿಗೆ ಪೂರಕವಾದ ವಾತಾವರಣವಿರುವುದರಿಂದ ನಂಜನಗೂಡು ಮತ್ತು ಗುಂಡ್ಲುಪೇಟೆ ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸುವುದು 100ಕ್ಕೆ ನೂರರಷ್ಟು ಖಚಿತ ಎಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
 
ಉಭಯ ಕ್ಷೇತ್ರಗಳ ಉಸ್ತುವಾರಿ ಹೊಣೆಯನ್ನು ವಿಧಾನಪರಿಷತ್ ಸದಸ್ಯ ವಿ.ಸೋಮಣ್ಣ ಮತ್ತು ಸಂಸದೆ ಶೋಭಾ ಕರಂದ್ಲಾಜೆಯವರಿಗೆ ವಹಿಸಲಾಗಿದೆ ಎಂದು ತಿಳಿಸಿದ್ದಾರೆ.
 
ಮಾರ್ಚ್ 12, 13 ರಿಂದ ಚುನಾವಣೆ ಪ್ರಚಾರಕ್ಕೆ ಚಾಲನೆ ನೀಡಲಾಗುವುದು. ಬಿಜೆಪಿ ಪಕ್ಷದ ಹಿರಿಯ ಮುಖಂಡರು ಚುನಾವಣೆ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಬಿ.ಎಸ್.ಯಡಿಯೂರಪ್ಪ ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ