ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬರುತ್ತೇವೆ: ಕುಮಾರಸ್ವಾಮಿ

ಭಾನುವಾರ, 4 ಡಿಸೆಂಬರ್ 2022 (12:22 IST)
ತುಮಕೂರು : ವರುಣಾದಲ್ಲಿ ನಮ್ಮ ಅಭ್ಯರ್ಥಿ ತಯಾರಾಗಿದ್ದಾರೆ. ವರುಣಾ ಕ್ಷೇತ್ರದಿಂದ ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬರುತ್ತೇವೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಸಂದರ್ಭ ಮಾತನಾಡಿದ ಕುಮಾರಸ್ವಾಮಿ, ಈಗಾಗಲೇ 3 ಜಿಲ್ಲೆಗಳ ರಥಯಾತ್ರೆ ಕಾರ್ಯಕ್ರಮ ಮುಗಿಸಿ ತುಮಕೂರಿಗೆ ಎಂಟ್ರಿ ಕೊಟ್ಟಿದ್ದೇವೆ.

ತುಮಕೂರು ನಗರ ಕ್ಷೇತ್ರದಲ್ಲಿ ರಥಯಾತ್ರೆ ಪ್ರಾರಂಭ ಮಾಡುವ ಮುನ್ನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ, ಶಿವಕುಮಾರ ಶ್ರೀಗಳ ಗದ್ದುಗೆಗೆ ಪೂಜೆ ಸಲ್ಲಿಸಿ ಪಂಚರತ್ನ ರಥಯಾತ್ರೆ ಪ್ರಾರಂಭಿಸಿದ್ದೇವೆ ಎಂದು ತಿಳಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ