ದುರ್ಬಲ ಮನಸ್ಸಿನವರು ಪೊಲೀಸ್ ಇಲಾಖೆಗೆ ಬರದಿರುವುದು ಒಳ್ಳೆಯದು: ಮೀರಾ

ಬುಧವಾರ, 20 ಜುಲೈ 2016 (18:22 IST)
ಪೊಲೀಸರ ಮೇಲೆ ಹಲವು ರೀತಿಯ ಒತ್ತಡಗಳು ಬರುತ್ತಿರುತ್ತವೆ. ಹೀಗಾಗಿ ದುರ್ಬಲ ಮನಸ್ಸಿನವರು ಇಲಾಖೆಗೆ ಬರದಿರುವುದು ಒಳ್ಳೆಯದು ಎಂದು ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷೆ ಮೀರಾ ಸಕ್ಸೇನಾ ಹೇಳಿದ್ದಾರೆ. 
 
ಪೊಲೀಸ್ ಇಲಾಖೆಯಲ್ಲಿ ಸಾಕಷ್ಟು ಒತ್ತಡಗಳಿರುತ್ತವೆ. ಆದರೆ, ಒತ್ತಡಕ್ಕೆ ಮಣಿದು ಆತ್ಮಹತ್ಯೆಗೆ ಮಾಡಿಕೊಳ್ಳುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟರು. 
 
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷೆ ಮೀರಾ ಸಕ್ಸೇನಾ, ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣ ಕೋರ್ಟ್‌ನಲ್ಲಿರುವುದರಿಂದ ನಾವೇನು ಪ್ರತಿಕ್ರಿಯೆ ನೀಡಲು ಬರುವುದಿಲ್ಲ. ಪೊಲೀಸ್ ಇಲಾಖೆಯಲ್ಲಿ ಸಾಕಷ್ಟು ಒತ್ತಡಗಳಿರುತ್ತವೆ. ಆದರೆ, ಒತ್ತಡಕ್ಕೆ ಮಣಿದು ಆತ್ಮಹತ್ಯೆಗೆ ಮಾಡಿಕೊಳ್ಳುವುದು ಸರಿಯಲ್ಲ ಎಂದರು.
 
ಬೆಂಗಳೂರಿನ ಮಹಿಳಾ ಪಿಎಸ್‌ಐ ರೂಪಾ ಆತ್ಮಹತ್ಯೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಹಿರಿಯ ಅಧಿಕಾರಿಗಳ ಜೊತೆ ನಡೆದ ವಾಗ್ವಾದದಿಂದ ಆತ್ಮಹತ್ಯೆ ಯತ್ನ ಮಾಡುವುದು ಸರಿಯಲ್ಲ. ಹಿರಿಯ ಅಧಿಕಾರಿಗಳು ಪ್ರಶ್ನೆ ಕೇಳದೆ ಆಡಳಿತ ನಡೆಸಲು ಸಾಧ್ಯವಿಲ್ಲ. ದುರ್ಬಲ ಮನಸ್ಸಿನವರು ಇಲಾಖೆಗೆ ಬರದಿರುವುದು ಒಳ್ಳೆಯದು ಎಂದು ಸಲಹೆ ನೀಡಿದ್ದರು.
 
ಇಲಾಖೆಯಲ್ಲಿನ ಒತ್ತಡ ಕಡಿಮೆ ಮಾಡಲು ಪೊಲೀಸರಿಗೆ ಕೌನ್ಸಲಿಂಗ್ ಮಾಡುವುದು ಸೂಕ್ತ ಎಂದು ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷೆ ಮೀರಾ ಸಕ್ಸೇನಾ ಅಭಿಪ್ರಾಯ ಪಟ್ಟಿದ್ದಾರೆ.

 
ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ