ಕೇಸರಿ ಶಾಲು ಧರಿಸಿ ಪಾಕಿಸ್ತಾನದ ಪರ ಘೋಷಣೆ ಕೂಗುವುದು ದೇಶದ್ರೋಹ-ಡಿಕೆಶಿ

geetha

ಬುಧವಾರ, 6 ಮಾರ್ಚ್ 2024 (15:01 IST)
ಹುಬ್ಬಳ್ಳಿ : ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಪ್ರಕರಣದಲ್ಲಿ ಸಿಎಂ ಡಿಸಿಎಂ‌ ರಾಜೀನಾಮೆಗೆ ಬಿಜೆಪಿ ನಾಯಕರ ಆಗ್ರಹದ ಬಗ್ಗೆ ಉತ್ತರಿಸಿದ  ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು, ಅವರಿಗೆ ರಾಜೀನಾಮೆ ಯಾವಾಗ ಬೇಕಂತೆ? ಯಾರಿಗೆ ರಾಜೀನಾಮೆ ನೀಡಬೇಕೆಂದು ಕೇಳಿ. ರಾಜೀನಾಮೆ ಕೊಡೋಣ ಎಂದು ವ್ಯಂಗ್ಯವಾಡಿದರು.   

ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತರು ಪಾಕಿಸ್ತಾನದ ಪರ ಘೋಷಣೆ ಕೂಗಿದಾಗ ಬಿಜೆಪಿ ಸರ್ಕಾರ ಅವರನ್ನು ಯಾಕೆ ಬಂಧಿಸಲಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಪ್ರಶ್ನಿಸಿದ್ದಾರೆ. ಬುಧವಾರ ಹುಬ್ಬಳ್ಳಿಯಲ್ಲಿ ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇಸರಿ ಶಾಲು ಧರಿಸಿ ಪಾಕಿಸ್ತಾನದ ಪರ ಘೋಷಣೆ ಕೂಗುವುದು ದೇಶದ್ರೋಹವಲ್ಲದೇ ಎಂದು ಟೀಕಿಸಿದರು. 

 ಈ ಪ್ರಕರಣಕ್ಕೆ ಯಾವುದೇ ಎಫ್ಎಸ್ಎಲ್ ವರದಿ ಅವಶ್ಯಕತೆ ಇಲ್ಲ. ನಾವು ರಾಜಕೀಯ ಮಾಡಬಾರದು ಎಂದು ಸುಮ್ಮನೆ ಇದ್ದೆವು. ಅವರ ಈ ಡೋಂಗಿ ಆಟಗಳನ್ನು ನೋಡಿ ನಮ್ಮ ಸ್ಥಳೀಯ ಶಾಸಕರು ದೂರು ನೀಡಿದ್ದು, ತನಿಖೆ ನಡೆಸುತ್ತಿದ್ದೇವೆ ಎಂದು ನುಡಿದ ಡಿಕೆಶಿ,  ಕೊಲೆ ಕೊಲೆಯೇ, ಕಳ್ಳತನ ಕಳ್ಳತನವೇ, ನುಡಿಮುತ್ತು ನುಡಿಮುತ್ತೇ ಅಲ್ಲವೇ? ದೇಶದ್ರೋಹ ದೇಶದ್ರೋಹವೇ ಅಲ್ಲವೇ ಎಂದು ಬಿಜೆಪಿ ವಿರುದ್ದ ಕಿಡಿಕಾರಿದರು. 
 
ನಮ್ಮ ಸರ್ಕಾರದಲ್ಲಿ ಘೋಷಣೆ ಕೂಗಿದವರ ವಿರುದ್ಧ ವಿಚಾರಣೆ ನಡೆಸುತ್ತಿದ್ದೇವೆ. ದೇಶದ ಬಗ್ಗೆ ಬದ್ಧತೆ ನಮಗಿದೆಯೋ? ಬಿಜೆಪಿಯವರಿಗೆ ಇದೆಯೋ?" ಎಂದು ತಿರುಗೇಟು ನೀಡಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ