'ಭಾರಿ ಮಳೆ' ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ, 'ಯೆಲ್ಲೋ ಅಲರ್ಟ್'

ಶುಕ್ರವಾರ, 20 ಆಗಸ್ಟ್ 2021 (08:24 IST)
ಬೆಂಗಳೂರು: ಆಗಸ್ಟ್ 23 ರಿಂದ ವ್ಯಾಪಕ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸದ್ಯ ರಾಜ್ಯದ ಕೆಲವು ಪ್ರದೇಶಗಳಲ್ಲಿ ಮಳೆಯ ಅಬ್ಬರ ಕಡಿಮೆಯಾಗಿದೆ. ಆಗಸ್ಟ್ 23 ರಿಂದ ಕರಾವಳಿ ಮತ್ತು ಉತ್ತರ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ. ಅದೇ ರೀತಿ ಉತ್ತರ ಒಳನಾಡಿನ ಧಾರವಾಡ, ಗದಗ, ಹಾವೇರಿ, ಬೆಳಗಾವಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಕಲಬುರ್ಗಿ ಜಿಲ್ಲೆಗಳಲ್ಲಿ ಎರಡು ದಿನ ಗುಡುಗು ಸಹಿತ ಮಳೆಯಾಗಲಿದೆ.
ದಕ್ಷಿಣ ಒಳನಾಡಿನ ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ ಹಾಗೂ ಮಲೆನಾಡಿನ ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಹಾಸನ ಭಾಗದಲ್ಲಿ ಆಗಸ್ಟ್ 23, 24 ರಂದು ಹೆಚ್ಚಿನ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ