ಜು.5ರಿಂದ ವೀಕೆಂಡ್, ನೈಟ್ ಕರ್ಪ್ಯೂ ರದ್ದು!

ಶನಿವಾರ, 3 ಜುಲೈ 2021 (20:00 IST)
ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಮಾಣ ಇಳಿಯುತ್ತಿರುವ ಹಿನ್ನೆಲೆಯಲ್ಲಿ ಜುಲೈ 5ರಿಂದ 19ವರೆಗೆ ಅನ್ ಲಾಕ್-3 ಘೋಷಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವೀಕೆಂಡ್ ಮತ್ತು ನೈಟ್ ಕರ್ಫ್ಯೂ ರದ್ದುಗೊಳಿಸಿದ್ದಾರೆ.
ಶನಿವಾರ ಸಚಿವರ ಜೊತೆಗಿನ ಸಭೆಯ ನಂತರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಹು ನಿರೀಕ್ಷಿತ ಸಿನಿಮಾ ಥಿಯೇಟರ್ ಗಳಿಗೆ ಅನುಮತಿ ನೀಡಿಲ್ಲ. ಮದುವೆ ಕಾರ್ಯಕ್ರಮದಲ್ಲಿ ಹಾಜರಿ ಸಂಖ್ಯೆಯನ್ನು 100ಕ್ಕೇರಿಸಲಾಗಿದೆ ಎಂದರು.
ಕೈಗಾರಿಕೆ ಮತ್ತು ವಾಣಿಜ್ಯ ಚಟುವಟಿಕೆಗಳು ಶೇ.100ರಷ್ಟು ಸಿಬ್ಬಂದಿಗಳೊಂದಿಗೆ ಕಾರ್ಯ ನಿರ್ವಹಿಸಲು ಅವಕಾಶ ನೀಡಲಾಗಿದೆ.  ಮಾಲ್ ಗಳನ್ನು ಸಂಪೂರ್ಣವಾಗಿ ತೆರೆಯಲು ಅವಕಾಶ ನೀಡಲಾಗಿದೆ. ಮೆಟ್ರೋ ಸಂಚಾರ ಶೇ.100ರಷ್ಟು ಅನುಮತಿ ನೀಡಲಾಗಿದೆ ಎಂದರು.
ಅನ್ ಲಾಕ್ 3.0 ಮುಖ್ಯಾಂಶಗಳು
ಮಾಲ್ ಗಳನ್ನು ತೆರೆಯಲು ಅವಕಾಶ ನೀಡಲಾಗಿದೆ. 
 ಮೆಟ್ರೋ ಸೇರಿದಂತೆ ಸಾರ್ವಜನಿಕ ಸಾರಿಗೆ ಶೇ. 100 ರಷ್ಟು ಪ್ರಮಾಣಿಕರೊಂದಿಗೆ ಸಂಚರಿಸಲು ಅವಕಾಶ ನೀಡಲಾಗಿದೆ.
ಧಾರ್ಮಿಕ ಸ್ಥಳಗಳಲ್ಲಿ ದರ್ಶನಕ್ಕೆ ಅವಕಾಶ ನೀಡಲಾಗಿದೆ. 
ಮದುವೆ ಹಾಗೂ ಇನ್ನಿತರೆ ಕೌಟುಂಬಿಕ ಶುಭ ಸಮಾರಂಭಗಳಿಗೆ 100 ಜನರೊಂದಿಗೆ ಭಾಗವಹಿಸಲು ಅವಕಾಶ ನೀಡಲಾಗಿದೆ. 
ಈಜುಕೊಳಗಳಲ್ಲಿ ಕ್ರೀಡಾಪಟುಗಳಿಗೆ ಅಭ್ಯಾಸ ಮಾಡಲು ಅವಕಾಶ ನೀಡಲಾಗಿದೆ. 
ಕ್ರೀಡಾ ಸಂಕೀರ್ಣಗಳಲ್ಲಿ ಕ್ರೀಡಾಪಟುಗಳಿಗೆ ಅಭ್ಯಾಸ ಮಾಡಲು ಅವಕಾಶ ನೀಡಲಾಗಿದೆ. 
ಅಂತ್ಯ ಸಂಸ್ಕಾರಕ್ಕೆ 20 ಸದಸ್ಯರು ಭಾಗವಹಿಸಲು ಅವಕಾಶ ನೀಡಲಾಗಿದೆ. 
ಕೊರೊನಾ ಕರ್ಫ್ಯೂ (ನೈರ್ಟ್ ಕರ್ಫ್ಯೂ) ರಾತ್ರಿ 9 ರಿಂದ ಬೆಳಿಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ. 
ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿರುವುದಿಲ್ಲ. 
ಸಾಮಾಜಿಕ, ಧಾರ್ಮಿಕ, ಮತ್ತು ರಾಜಕೀಯ ಸಭೆ ಸಮಾರಂಭಗಳಿಗೆ, ಪ್ರತಿಭಟನೆಗಳಿಗೆ ಹಾಗೂ ಇತರೆ ಸಮಾರಂಭಗಳಿಗೆ ಅವಕಾಶವಿಲ್ಲ. 
ಶೈಕ್ಷಣಿಕ ಸಂಸ್ಥೆಗಳನ್ನು ತೆರೆಯುವ ಬಗ್ಗೆ ಪ್ರತ್ಯೇಕವಾಗಿ ತೀರ್ಮಾನಿಸಲಾಗುವುದು.
ಪಬ್ ಗಳು ಕಾರ್ಯನಿರ್ವಹಿಸಲು ಅವಕಾಶವಿಲ್ಲ. ಬಾರ್ಗಳು ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ. 
ಚಿತ್ರಮಂದಿರಗಳು ಕಾರ್ಯನಿರ್ವಹಣೆಗೆ ಅವಕಾಶವಿಲ್ಲ. 
ಜಿಲ್ಲೆಯಲ್ಲಿರುವ ಪರಿಸ್ಥಿತಿಗನುಗುಣವಾಗಿ ಆಯಾಯ ಜಿಲ್ಲೆಯ ಜಿಲ್ಲಾಡಳಿತಗಳು ಇನ್ನೂ ಹೆಚ್ಚಿನ ನಿರ್ಬಂಧಗಳು ಅವಶ್ಯವಿದ್ದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರುಗಳೊಂದಿಗೆ ಸಮಾಲೋಚಿಸಿ ತೀರ್ಮಾನ ತೆಗೆದುಕೊಳ್ಳಲು ಸೂಚಿಸಿದೆ. 
ಕೋವಿಡ್-19 ನಿಯಂತ್ರಿಸುವ ದೃಷ್ಟಿಯಿಂದ ಸಾರ್ವಜನಿಕರು ನಿಯಂತ್ರಣ ಕ್ರಮಗಳಾದ ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು ಹಾಗೂ ವೈಯಕ್ತಿಕ ಮತ್ತು ಸಾಮಾಜಿಕ ಸ್ವಚ್ಛತೆ ಕಡೆಗೆ ಗಮನ ಹರಿಸಿ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಲು ವಿನಂತಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ