ವೀಕೆಂಡ್ ಕರ್ಫ್ಯೂ ಸದ್ಯಕ್ಕೆ ವಾಪಸ್ ಇಲ್ಲವೇ ಇಲ್ಲ: ಸಿಎಂ

ಗುರುವಾರ, 6 ಜನವರಿ 2022 (13:00 IST)
ಬೆಂಗಳೂರು : ವೀಕೆಂಡ್ ಕರ್ಫ್ಯೂ ಸದ್ಯಕ್ಕೆ ವಾಪಸ್ ಇಲ್ಲವೇ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

ಇಂದು ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ವಾರ ಪರಿಸ್ಥಿತಿ ನೋಡಿಕೊಂಡು ತೀರ್ಮಾನ ಕೈಗೊಳ್ಳಲಾಗುವುದು. ಸದ್ಯ ನೈಟ್ ಕರ್ಫ್ಯೂ ಮುಂದುವರಿಯುತ್ತಿದ್ದು, ಅದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಹೇಳಿದರು.

ವೀಕೆಂಡ್ ಲಾಕ್ ಡೌನ್ ಬಗ್ಗೆ ಇಂದಿನ ಸಭೆಯಲ್ಲಿ ಯಾವುದೇ ತೀರ್ಮಾನ ಆಗಿಲ್ಲ. ವೀಕೆಂಡ್ ಕರ್ಫ್ಯೂನಿಂದ ವಾಣಿಜ್ಯ ಚಟುವಟಿಕೆಗಳಿಗೆ ಯಾವುದೇ ತೊಂದರೆ ಆಗಿಲ್ಲ. ಕೊರೊನಾ ನೋಡಿಕೊಂಡು ಮುಂದೆ ತೀರ್ಮಾನಿಸೋಣ. ಕ್ಯಾಬಿನೆಟ್ ನಲ್ಲಿ ಕೆಲವು ವಿಚಾರಗಳ ಬಗ್ಗೆ ಚರ್ಚೆ ನಡೆದಿದೆ ಎಂದರು. 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ