ಸೋನಿಯಾ ಗಾಂಧಿ ಬಿಜೆಪಿಗೆ ಬಂದ್ರೂ ಸ್ವಾಗತ: ಕೆ.ಎಸ್.ಈಶ್ವರಪ್ಪ

ಶನಿವಾರ, 7 ಅಕ್ಟೋಬರ್ 2017 (17:26 IST)
ಬಿಜೆಪಿ ಪಕ್ಷದ ತತ್ವ ಸಿದ್ದಾಂತಗಳನ್ನು ಒಪ್ಪಿ ಯಾರೇ ಬಂದರೂ ಸ್ವಾಗತಿಸುತ್ತೇವೆ. ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಬಂದರೂ ಸ್ವಾಗತಿಸುತ್ತೇವೆ ಎಂದು ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಪ್ರಮೋದ್ ಮದ್ವರಾಜ್ ಬಿಜೆಪಿ ಪಕ್ಷಕ್ಕೆ ಬಂದಲ್ಲಿ ಸ್ವಾಗತಿಸುತ್ತೇವೆ.ಮುಂದೆ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದಿಲ್ಲ ಎಂದು ಭವಿಷ್ಯ ನುಡಿದರು.
 
ಕಾಂಗ್ರೆಸ್ ಪಕ್ಷದ ಪ್ರಮುಖ ಮುಖಂಡರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಲು ತುದಿಗಾಲ ಮೇಲೆ ನಿಂತಿದ್ದಾರೆ. ಮುಂಬರುವ ದಿನಗಳಲ್ಲಿ ಮತ್ತಷ್ಟು ಮುಖಂಡರು ಬಿಜೆಪಿಗೆ ಸೇರಲಿದ್ದಾರೆ ಎಂದರು.
 
ಸಿಎಂ ಸಿದ್ದರಾಮಯ್ಯ ಅಧಿಕಾರದ ಮದದಿಂದ ಮೆರೆಯುತ್ತಿದ್ದಾರೆ. ಕೇವಲ ಹಣದಿಂದಲೇ ಚುನಾವಣೆ ಗೆಲ್ಲುತ್ತೇನೆ ಎನ್ನುವ ಭ್ರಮೆಯಲ್ಲಿದ್ದಾರೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಲೇವಡಿ ಮಾಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ