ಅಮಿತ್ ಶಾ ಹೇಳಿಕೆಗೆ ತೀರುಗೇಟು ಕೊಟ್ಟ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ಬುಧವಾರ, 23 ಮೇ 2018 (16:26 IST)
ಬೆಂಗಳೂರು : ಪ್ರಾದೇಶಿಕ ಪಕ್ಷದ ನಾಯಕರು ಒಂದೆಡೆ ಸೇರಿದಾಕ್ಷಣ ದೇಶದಲ್ಲಿ ತೃತೀಯ ರಂಗದಿಂದ ಏನೂ ಮಾಡಲು ಸಾಧ್ಯವಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ  ಹೇಳಿಕೆಗೆ ಇದೀಗ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತಿರುಗೇಟು ನೀಡಿದ್ದಾರೆ.


ಇಂದು ಕುಮಾರಸ್ವಾಮಿ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾಗಿಯಾಗಲು ಆಗಮಿಸಿರುವ ಮಮತಾ ಬ್ಯಾನರ್ಜಿ ನಗರದ ಖಾಸಗಿ ಹೋಟೆಲ್‌ನಲ್ಲಿ ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರನ್ನು ಭೇಟಿಯಾಗಿ ನಂತರ ಮಾಧ್ಯಮಗಳ ಜೊತೆ ಮಾತನಾಡಿ,’ ಪ್ರಾದೇಶಿಕ ಪಕ್ಷದ ನಾಯಕರು ಒಂದೆಡೆ ಸೇರಿದಾಕ್ಷಣ ದೇಶದಲ್ಲಿ ತೃತೀಯ ರಂಗದಿಂದ ಏನೂ ಮಾಡಲು ಸಾಧ್ಯವಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿರಬಹುದು. ಆದರೆ ನಮ್ಮ ಕೆಲಸವನ್ನ ನಾವು ಮುಂದುವರಿಸುತ್ತೇವೆ  ಪ್ರಾದೇಶಿಕ ಪಕ್ಷಗಳನ್ನ ಶಕ್ತಿಯುತವಾಗಿ ಮಾಡುವುದು ನಮ್ಮ ಕೆಲಸ. ಪ್ರಾದೇಶಿಕ ಪಕ್ಷಗಳು ಬಲಗೊಂಡರೆ ದೇಶದಲ್ಲಿ ಉತ್ತಮ ಆಡಳಿತ ನೀಡುವ ಸರ್ಕಾರ ರಚಿಸಬಹುದು. ಈ ನಿಟ್ಟಿನಲ್ಲಿ ಚಂದ್ರುಬಾಬು ನಾಯ್ಡು, ನಾನು ಇಂದು ಬೆಂಗಳೂರಿನಲ್ಲಿ ಭೇಟಿ ಆಗಿದ್ದು ಉತ್ತಮ ಚರ್ಚೆಗೆ ಅವಕಾಶ ಮಾಡಿಕೊಟ್ಟಂತಾಯಿತು ‘ ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ