ಟ್ಯಾಕ್ಸ್ ಬಗ್ಗೆ ಸಚಿವರು ಹೇಳುತ್ತಿರೋದೇನು?

ಸೋಮವಾರ, 17 ಆಗಸ್ಟ್ 2020 (18:44 IST)
ವಿವಿಧ ಕೈಗಾರಿಕಾ ಅಭಿವೃದ್ಧಿ ಪ್ರದೇಶಗಳ ಮೂಲಭೂತ ಸೌಕರ್ಯಗಳ ನಿರ್ವಹಣೆಗೆ ವಿಧಿಸುವ ತೆರಿಗೆ ಆಕರಣೆ ಹಾಗೂ ನಿರ್ವಹಣೆ ಕುರಿತು ಶೀಘ್ರವೇ ಪರಿಹಾರ ದೊರಕುವ ಲಕ್ಷಣಗಳಿವೆ.


ಹುಬ್ಬಳ್ಳಿ - ಧಾರವಾಡದ ವಿವಿಧ ಕೈಗಾರಿಕಾ ಅಭಿವೃದ್ಧಿ ಪ್ರದೇಶಗಳ ಮೂಲಭೂತ ಸೌಕರ್ಯಗಳ ನಿರ್ವಹಣೆಗೆ ವಿಧಿಸುವ ತೆರಿಗೆ ಆಕರಣೆ ಹಾಗೂ ನಿರ್ವಹಣೆ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಶೀಘ್ರ ಪರಿಹಾರ ಒದಗಿಸಲಾಗುವುದು ಎಂದು ಬೃಹತ್‌, ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಹೇಳಿದ್ದಾರೆ.

ಹುಬ್ಬಳ್ಳಿ ಗೋಕುಲ ರಸ್ತೆಯ ಎಂ.ತಿಮ್ಮಸಾಗರ, ತಾರಿಹಾಳ, ಗಾಮನಗಟ್ಟಿ, ಇಟ್ಟಿಗಟ್ಟಿ ಹಾಗೂ ಧಾರವಾಡದ ಬೇಲೂರು, ಮುಮ್ಮಿಗಟ್ಟಿ ಕೈಗಾರಿಕಾ ಅಭಿವೃದ್ಧಿ ಪ್ರದೇಶಗಳು ಮತ್ತು ಕೆ ಎಸ್ ಎಸ್ ಐ ಡಿ ಸಿಯ ಕೈಗಾರಿಕಾ ವಸಾಹತು ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.  

ಹೊಸ ಕೈಗಾರಿಕಾ ನೀತಿ, ಭೂ ಸುಧಾರಣೆ ಕಾಯ್ದೆಯ ತಿದ್ದುಪಡಿಗಳಿಂದ ಬಹಳಷ್ಟು ಉದ್ಯಮಿಗಳು ಬಂಡವಾಳ ಹೂಡಿಕೆಗೆ ಉತ್ಸುಕರಾಗಿದ್ದಾರೆ. ಹುಬ್ಬಳ್ಳಿ ಧಾರವಾಡ ಸೇರಿದಂತೆ ರಾಜ್ಯದ
ಎರಡನೇ ಹಂತದ ನಗರಗಳಲ್ಲಿ ಉದ್ಯಮಗಳು ತಲೆ ಎತ್ತಲಿವೆ ಎಂದರು.



ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ