5 ಗ್ಯಾರಂಟಿ ಯೋಜನೆಗಳು ಯಾವುದು?
ಎಲ್ಲಾ ಐದೂ ಗ್ಯಾರಂಟಿಗಳ ಜಾರಿ ಸದ್ಯಕ್ಕೆ ಕಷ್ಟ. ಬಜೆಟ್ ನಲ್ಲಿ ಅನುದಾನ ಹಂಚಿಕೆ ಇಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಧಿಕಾರಿಗಳ ಉತ್ತರಕ್ಕೆ ಸಚಿವರುಗಳು, ನಾವು ಗ್ಯಾರಂಟಿ ಜಾರಿ ಮಾಡಲೇಬೇಕು ಎಂದು ಪಟ್ಟು ಹಿಡಿದಿದ್ದಾರೆ.
ಕಾಂಗ್ರೆಸ್ ನಾಯಕರು ಚುನಾವಣಾ ಪ್ರಚಾರದಲ್ಲಿ ಐದು ಗ್ಯಾರಂಟಿಗಳನ್ನು ಮೊದಲ ಕ್ಯಾಬಿನೆಟ್ನಲ್ಲೇ ಜಾರಿ ಮಾಡುತ್ತೇವೆ ಎಂದು ಭರವಸೆ ನೀಡಿದ್ದರು. ಆದರೆ ಮೊದಲ ಕ್ಯಾಬಿನೆಟ್ನಲ್ಲಿ ಗ್ಯಾರಂಟಿ ಜಾರಿ ಸಂಬಂಧ ತಾತ್ವಿಕ ಒಪ್ಪಿಗೆ ನೀಡಲಾಗಿತ್ತು.