ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಯಾವುದೆಲ್ಲಾ ಬೆಲೆ ಏರಿಕೆ ಆಗಿದೆ: ಇಲ್ಲಿದೆ ಲಿಸ್ಟ್

Krishnaveni K

ಬುಧವಾರ, 20 ನವೆಂಬರ್ 2024 (14:10 IST)
ಬೆಂಗಳೂರು: ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕಾಗಿ ಕೆಲವೊಂದು ದುಬಾರಿಯಾಗಿದೆ ಎಂಬ ಆರೋಪಗಳಿವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಯಾವುದೆಲ್ಲಾ ದುಬಾರಿಯಾಗಿದೆ ಇಲ್ಲಿದೆ ವಿವರ.
 

ಇತ್ತೀಚೆಗಷ್ಟೇ ರಾಜ್ಯ ಸರ್ಕಾರ ಮೆಡಿಕಲ್ ಕಾಲೇಜು ವ್ಯಾಪ್ತಿಯಲ್ಲಿರುವ ಆಸ್ಪತ್ರೆಗಳ ಚಿಕಿತ್ಸಾ ದರ ಹೆಚ್ಚು ಮಾಡಿತ್ತು. ಇದೀಗ ಪ್ರಾಥಮಿಕ ಆರೋಗ್ಯ ಕೇಂದ್ರದ ಚಿಕಿತ್ಸಾ ದರವನ್ನೂ ಹೆಚ್ಚಿಸಲು ಮುಂದಾಗಿದೆ. ಇದರ ಜೊತೆಗೆ ಬಿಪಿಎಲ್ ಕಾರ್ಡ್ ಪರಿಷ್ಕರಣೆಗೆ ಮುಂದಾಗಿದ್ದು, ಹಲವರಿಗೆ ಬಿಪಿಎಲ್ ಕಾರ್ಡ್ ರದ್ದಾಗಿ ಎಪಿಎಲ್ ಗೆ ಬದಲಾಗಿದೆ. ಇದೆಲ್ಲವೂ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕಾಗಿ ಮಾಡಲಾಗುತ್ತಿರುವ ಬೆಲೆ ಏರಿಕೆ ಎಂಬ ಆರೋಪಗಳಿವೆ.

ಒಂದು ಕಡೆ ಜನರಿಗೆ ಗ್ಯಾರಂಟಿ ರೂಪದಲ್ಲಿ ಉಚಿತ ಯೋಜನೆಗಳನ್ನು ಕೊಡಲು ಇನ್ನೊಂದು ಕಡೆ ಕಿತ್ತುಕೊಳ್ಳಲಾಗುತ್ತಿದೆ ಎಂಬ ಆರೋಪಗಳಿವೆ. ಇದರ ನಡುವೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಯಾವುದೆಲ್ಲಾ ಏರಿಕೆಯಾಗಿದೆ ಇಲ್ಲಿದೆ ವಿವರ.

ಮದ್ಯದ ಮೇಲಿನ ಅಬಕಾರಿ ಸುಂಕವನ್ನು ಶೇ.20 ರಷ್ಟು ರಾಜ್ಯ ಸರ್ಕಾರ ಹೆಚ್ಚು ಮಾಡಿತ್ತು. ಇದರಿಂದಾಗಿ ಮದ್ಯದ ಬೆಲೆ ಹೆಚ್ಚಳವಾಗಿದೆ.
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಪ್ರತೀ ಲೀಟರ್ ಗೆ 3 ರೂ. ಗಳಷ್ಟು ಏರಿಕೆ ಮಾಡಲಾಗಿದೆ.
ನಂದಿನಿ ಹಾಲಿನ ಬೆಲೆಯನ್ನು ಪ್ರತೀ ಲೀಟರ್ ಗೆ 2 ರೂ.ಗಳಷ್ಟು ಏರಿಕೆ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಮತ್ತೊಮ್ಮೆ ದರ ಪರಿಷ್ಕರಣೆಯಾಗುವ ಸುಳಿವು ಇದೆ.
ಬಿತ್ತನೆ ಬೀಜದ ಬೆಲೆಯಲ್ಲಿ ಶೇ.50 ರಿಂದ ಶೇ.60 ಕ್ಕೆ ಏರಿಕೆಯಾಗಿದೆ.
ಹೊಸದಾಗಿ ವಾಹನ ಖರೀದಿ ಮಾಡಿದಾಗ ಮಾಡುವ ನೋಂದಣಿ ಶುಲ್ಕದಲ್ಲಿ ಶೇ.3 ರಷ್ಟು ಹೆಚ್ಚಳವಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ