ಸರ್ಕಾರ ರಚನೆಯ ಬಗ್ಗೆ ರಾಜ್ಯ ಬಿಜೆಪಿ ನಿಯೋಗಕ್ಕೆ ಅಮಿತ್ ಶಾ ಹೇಳಿದ್ದೇನು?

ಗುರುವಾರ, 25 ಜುಲೈ 2019 (12:46 IST)
ನವದೆಹಲಿ : ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಪತನಗೊಂಡ ಹಿನ್ನಲೆಯಲ್ಲಿ ಸರ್ಕಾರ ರಚನೆ ಮಾಡಲು ಸಲುವಾಗಿ ರಾಜ್ಯ ಬಿಜೆಪಿ ನಿಯೋಗ ಹೈಕಮಾಂಡ್ ನ್ನು ದೆಹಲಿಯಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದ್ದರೂ ಸರ್ಕಾರದ ರಚನೆಗೆ ಗ್ರೀನ್ ಸಿಗ್ನಲ್ ಸಿಗಲಿಲ್ಲ ಎಂಬುದಾಗಿ ತಿಳಿದುಬಂದಿದೆ.




ರಾಜ್ಯ ಬಿಜೆಪಿ ನಿಯೋಗದಲ್ಲಿ ಜಗದೀಶ್ ಶೆಟ್ಟರ್, ಅರವಿಂದ ಲಿಂಬಾವಳಿ, ಮಾಧುಸ್ವಾಮಿ, ಕೆ.ಜಿ. ಬೋಪಯ್ಯ, ಬಿ.ವೈ ವಿಜಯೇಂದ್ರ ರಾತ್ರಿ 10 ಗಂಟೆಗೆ ದೆಹಲಿಗೆ ಪ್ರಯಾಣ ಬೆಳೆಸಿದ್ದು, ಇಂದು ಕೇಂದ್ರ ಗ್ರಹ ಸಚಿವ  ಅಮಿತ್ ಶಾ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಸರ್ಕಾರದ ರಚನೆಯ ಕುರತು ಮಾತುಕತೆ ನಡೆಸಿದ್ದಾರೆ


ಈ ಸಂದರ್ಭದಲ್ಲಿ ಅಮಿತ್ ಶಾ ಅವರು, ಪಕ್ಷದ ಸಂಸದೀಯ ಸಭೆಯಲ್ಲಿ ತೀರ್ಮಾನ ಕೈಗೊಳ್ಳುವವರೆಗೂ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಸುವುದು ಅಥವಾ ಸರ್ಕಾರ ರಚನೆಯ ಹಕ್ಕು ಮಂಡಿಸಲು ರಾಜ್ಯಪಾಲರನ್ನು ಭೇಟಿ ಮಾಡುವ ಕೆಲಸವನ್ನು ಮಾಡಬಾರದು ಎಂದು ಸ್ಪಷ್ಟ ಸೂಚನೆ ನೀಡಿದ್ದಾರೆಂದು ಹೇಳಲಾಗಿದೆ. ಅಲ್ಲದೇ  ಕೆಲ ಅತೃಪ್ತ ಶಾಸಕರುಗಳ ಮೇಲೆ ಬಿಜೆಪಿ ಕೇಂದ್ರ ನಾಯಕರಿಗೆ ಅನುಮಾನವಿರುವುದಾಗಿ ಇಂದು ತಮ್ಮನ್ನು ಭೇಟಿ ಮಾಡಿದ ರಾಜ್ಯ ಬಿಜೆಪಿ ನಾಯಕರಿಗೆ ಅಮಿತ್ ಶಾ ತಿಳಿಸಿದ್ದಾರೆ ಎಂದು ಹೇಳಲಾಗಿದೆ.


ಇಂದು ಮಧ್ಯಾಹ್ನ 3 ಗಂಟೆಗೆ ಅಮಿತ್ ಶಾ ಮತ್ತೊಮ್ಮೆ ರಾಜ್ಯ ಬಿಜೆಪಿ ನಾಯಕರನ್ನು ಭೇಟಿ ಮಾಡಲಿದ್ದು, ಆ ಬಳಿಕ ಅಂತಿಮ ನಿರ್ಧಾರ ಹೊರಬೀಳಲಿದೆ ಎನ್ನಲಾಗಿದೆ.

 
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ