ಕೇಂದ್ರ ಸರ್ಕಾರದ ಸಾಲಮನ್ನಾ ನಿರ್ಧಾರದ ಬಗ್ಗೆ ಸಿಎಂ ಕುಮಾರಸ್ವಾಮಿ ಹೇಳಿದ್ದೇನು?

ಗುರುವಾರ, 13 ಡಿಸೆಂಬರ್ 2018 (09:02 IST)
ಬೆಳಗಾವಿ : ಸಾಲಮನ್ನಾ ಮಾಡಲು ಕೇಂದ್ರ ಸರ್ಕಾರ ಚಿಂತನೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಇದು ನನಗೆ ಅಚ್ಚರಿಯುಂಟು ಮಾಡಿಲ್ಲ ಎಂದು ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.


ಸುವರ್ಣಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ' ಕಳೆದ ಮೂರು ತಿಂಗಳಿನಿಂದ ಕೇಂದ್ರ ಸರ್ಕಾರ ರೈತರ ಸಾಲಮನ್ನಾ ಬಗ್ಗೆ ಸಿದ್ದತೆಯಲ್ಲಿ ತೊಡಗಿದೆ. ಈ ಬಗ್ಗೆ ನನಗೆ ಮಾಹಿತಿ ಇದೆ. ಚುನಾವಣೆ ವೇಳೆ ಸಾಲಮನ್ನಾ ಮಾಡುವ ಚಿಂತನೆ ಅವರಲ್ಲಿ ಇದೆ ‘ಎಂದು ಅವರು ಹೇಳಿದ್ದಾರೆ.


‘ಮುಂದಿನ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಲು ರೈತರ ಸಾಲಮನ್ನಾ ಒಂದೇ ಉತ್ತಮ ಮಾರ್ಗ. ದೇಶದ ರೈತರ ಸಾಲಮನ್ನಾ ಮಾಡದಿದ್ದರೆ ಗೆಲುವು ಅಸಾಧ್ಯ ಎಂಬುದು ಪ್ರಧಾನಿ ನರೇಂದ್ರ ಮೋದಿ ಅರಿವಾಗಿದೆ’ ಎಂದು ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ