ಒಂದೆಡೆ ಕೊರೊನಾ ಮತ್ತೊಂದೆಡೆ ಮಳೆ ಹಾನಿಯಿಂದ ರಾಜ್ಯ ಸಂಕಷ್ಟಕ್ಕೆ ಸಿಲುಕಿದೆ.
ಈ ನಡುವೆ ಸಿಎಂ ಬಿ.ಎಸ್.ಯಡಿಯೂರಪ್ಪ ವೈಮಾನಿಕ ಸಮೀಕ್ಷೆ ನಡೆಸಿದ್ದು, ಮಳೆ ಹಾನಿ ಕುರಿತು ಖುದ್ದು ವೈಮಾನಿಕ ವೀಕ್ಷಣೆ ಮಾಡಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ.
ಆಲಮಟ್ಟಿಯ ಕೆ.ಬಿ.ಜಿ.ಎನ್.ಎಲ್ ಸಭಾಂಗಣದಲ್ಲಿ ವಿಜಯಪುರ, ಬಾಗಲಕೋಟೆ ಹಾಗೂ ಗದಗ ಜಿಲ್ಲೆಗಳ ಸಚಿವರು, ಸಂಸತ್ ಸದಸ್ಯರು, ಶಾಸಕರು, ಜಿಲ್ಲಾಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಳೆ ಹಾನಿಗೆ ಸಂಬಂಧಿಸಿದಂತೆ ಸಿಎಂ ಯಡಿಯೂರಪ್ಪನವರು ಚರ್ಚೆ ನಡೆಸಿದರು.
ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಗಣಿ ಭೂ ವಿಜ್ಞಾನ ಇಲಾಖೆ ಸಚಿವ ಸಿ.ಸಿ.ಪಾಟೀಲ, ಕಂದಾಯ ಸಚಿವ ಆರ್.ಅಶೋಕ್, ಜಲ ಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ, ಶಾಸಕರಾದ ವೀರಣ್ಣ ಚರಂತಿಮಠ, ಮುರುಗೇಶ ನಿರಾಣಿ ಇದ್ದರು.