ಜಿಲ್ಲಾಧಿಕಾರಿಯೊಬ್ಬರು ತಾಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿದ್ರು. ಆಗ ಅಲ್ಲಿನ ಪರಿಸ್ಥಿತಿ ಕಂಡು ಖಡಕ್ ಆದೇಶ ನೀಡಿದ್ರು.
ದಿಢೀರ್ ಭೇಟಿ ನೀಡಿದ ಜಿಲ್ಲಾಧಿಕಾರಿಗಳು ದಾವಣಗೆರೆ ತಾಲೂಕು ಕಚೇರಿಯಲ್ಲಿರುವ ವ್ಯವಸ್ಥೆಗಳನ್ನು ಪರಿಶೀಲಿಸಿ ನಿಗದಿತ ಕಚೇರಿ ವೇಳೆಗೆ ಬಾರದಿದ್ದ ಸಿಬ್ಬಂದಿಗೆ ನೋಟಿಸ್ ಜಾರಿ ಮಾಡಲು ಸೂಚಿಸಿದ್ರು.
ದಾವಣಗೆರೆ ತಾಲೂಕು ಕಚೇರಿಗೆ ಸರಿಯಾದ ಸಮಯಕ್ಕೆ ಹಾಜರಾಗದ 28 ಅಧಿಕಾರಿ, ಸಿಬ್ಬಂದಿಗೆ ಡಿಸಿ ಮಹಾತೇಂಶ್ ಬೀಳಗಿ ನೋಟಿಸ್ ಜಾರಿ ಮಾಡಿದ್ದಾರೆ.
ಅನಿರೀಕ್ಷಿತವಾಗಿ ದಾಣಗೆರೆ ತಾಲೂಕು ಕಚೇರಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಅಲ್ಲಿರುವ ವ್ಯವಸ್ಥೆಗಳನ್ನು ಪರಿಶೀಲಿಸಿ ನಿಗದಿತ ಕಚೇರಿ ವೇಳೆಗೆ ಬಾರದಿದ್ದ ಸಿಬ್ಬಂದಿಗಳಿಗೆ ನೋಟಿಸ್ ಜಾರಿ ಮಾಡಲು ಸೂಚಿಸಿದ್ರು.
ಸಾರ್ವಜನಿಕರು ತಮ್ಮ ಅಗತ್ಯ ಕಾರ್ಯಗಳ ನಿಮಿತ್ತ ತಾಲ್ಲೂಕು ಕಚೇರಿಗೆ ಭೇಟಿ ನೀಡಿದಾಗ ಸಿಬ್ಬಂದಿಗಳು ಕಚೇರಿಯಲ್ಲಿ ಲಭ್ಯವಿಲ್ಲದಿದ್ದರೆ ಅವರ ಕೆಲಸ ಕಾರ್ಯಗಳು ಆಗುವುದಾದರೂ ಹೇಗೆ? ಇದರಿಂದ ಸಾರ್ವಜನಿಕರಿಗೆ ಬಹಳ ತೊಂದರೆಯಾಗುತ್ತಿದ್ದು ಇಂತಹ ಪ್ರಕರಣಗಳು ಕಂಡುಬಂದರೆ ಮುಂದಿನ ದಿನಗಳಲ್ಲಿ ಅಂತಹ ನೌಕರರ ವಿರುದ್ಧ ಕಾನೂನು ರೀತಿಯ ಶಿಸ್ತಿನ ಕ್ರಮಗಳನ್ನು ಕೈಗೊಳ್ಳಲಾಗುವುದು ಹಾಗೂ ಕರ್ತವ್ಯಲೋಪವೆಸಗಿದ ಸಿಬ್ಬಂದಿಗಳ ಸಂಬಳ ತಡೆ ಹಿಡಿಯಲಾಗವುದು ಎಂದು ಎಚ್ಚರಿಸಿದರು.