ವಿಪಕ್ಷ ನಾಯಕರ ಆಯ್ಕೆ ವಿಚಾರದ ಬಗ್ಗೆ ಡಾ.ಜಿ.ಪರಮೇಶ್ವರ್ ಹೇಳಿದ್ದೇನು?

ಗುರುವಾರ, 10 ಅಕ್ಟೋಬರ್ 2019 (11:08 IST)
ಬೆಂಗಳೂರು : ವಿಪಕ್ಷ ನಾಯಕರ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ಈ ವಿಚಾರದಲ್ಲಿ ಯಾವುದೇ ಅಸಮಾಧಾನವಿಲ್ಲ ಎಂದು ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ನಾನು ವಿರೋಧ ಪಕ್ಷದ ನಾಯಕ ಸ್ಥಾನದ ಆಕಾಂಕ್ಷಿಯಲ್ಲ. ಕೈ ಹೈಕಮಾಂಡ್  ತೀರ್ಮಾನಕ್ಕೆ ನಾನು ಬದ್ಧನಾಗಿದ್ದೇನೆ. ವಿಪಕ್ಷ ನಾಯಕರಾಗಲು ಸಿದ್ದರಾಮಯ್ಯ ಸಮರ್ಥರಿದ್ದಾರೆ. ಹೆಚ್.ಕೆ.ಪಾಟೀಲ್ ಹಿರಿಯರಿದ್ರು, ಅವರಿಗೆ ಅನುಭವವಿತ್ತು. ಹೀಗಾಗಿ ಅವರು ವಿಪಕ್ಷ ನಾಯಕ ಸ್ಥಾನ ನೀಡಲು ಕೇಳಿದ್ರು. ಆದ್ರೆ ಈ ವಿಚಾರದಲ್ಲಿ ಯಾವುದೇ ಅಸಮಾಧಾನವಿಲ್ಲ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ವಿಚಾರವೇ ಇಲ್ಲ  ಎಂದು ಅವರು ಸ್ಪಷ್ಟವಾಗಿ ಹೇಳಿದ್ದಾರೆ.


ಹಾಗೇ ಅಧಿವೇಶನಕ್ಕೆ ಸುದ್ದಿ ಮಾಧ್ಯಮಗಳ ಕ್ಯಾಮರಾ ನಿಷೇಧ ವಿಚಾರದ ಬಗ್ಗೆ ಮಾತನಾಡಿದ ಅವರು, ಇದು ಮಾಧ್ಯಮಗಳ ಸ್ವತಂತ್ರ್ಯ ಹತ್ತಿಕ್ಕುವ ಪ್ರಯತ್ನವಾಗಿದೆ. ಸರ್ಕಾರದ ಈ ತೀರ್ಮಾನ ತೆಗೆದುಕೊಂಡಿರುವುದು ಸರಿಯಲ್ಲ. ಇದರ ವಿರುದ್ಧ ಸದನದಲ್ಲಿ ಹೋರಾಟ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ