ಸಾರ್ವಜನಿಕ ಆಸ್ತಿಗೆ ನಷ್ಟ ಮಾಡುವವರ ವಿರುದ್ಧ ಕ್ರಮಕೈಗೊಳ್ಳುವ ಬಗ್ಗೆ ಶಾಸಕ ಜಿ.ಟಿ.ದೇವೇಗೌಡರು ಹೇಳಿದ್ದೇನು?

ಶುಕ್ರವಾರ, 27 ಡಿಸೆಂಬರ್ 2019 (10:39 IST)
ಮೈಸೂರು : ಸಾರ್ವಜನಿಕ ಆಸ್ತಿಗೆ ನಷ್ಟ ಮಾಡುವವರ ವಿರುದ್ಧ ಕ್ರಮ ವಿಚಾರ ಇಂಥವರ ವಿರುದ್ಧ ಕ್ರಮಕೈಗೊಳ್ಳುವುದಕ್ಕೆ ನನ್ನ ಅಭ್ಯಂತರವಿಲ್ಲ  ಎಂದು ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡರು ಹೇಳಿದ್ದಾರೆ.ಉತ್ತರ ಪ್ರದೇಶದಲ್ಲಿ ಸಾರ್ವಜನಿಕ ಆಸ್ತಿಗೆ ನಷ್ಟ ಮಾಡುವವರಿಂದಲೇ ನಷ್ಟ ಭರಿಸಲು ಸರ್ಕಾರ ಕ್ರಮಕೈಗೊಂಡಿದೆ. ಇದೇ ಮಾದರಿಯನ್ನು ಕರ್ನಾಟಕದಲ್ಲಿಯೂ ಜಾರಿಗೆ ತರಲು ಸರ್ಕಾರ ನಿರ್ಧಾರ ಮಾಡಿದೆ.


ಈ ಬಗ್ಗೆ ಮಾತನಾಡಿದ ಜಿ.ಟಿ.ದೇವೇಗೌಡರು , ಪ್ರತಿಭಟನೆ ಪ್ರತಿಯೊಬ್ಬ ನಾಗರಿಕನ ಹಕ್ಕು. ಆದರೆ ಪ್ರತಿಭಟನೆ ಶಾಂತಿಯುತವಾಗಿ ಮಾಡಬೇಕು.  ಸಾರ್ವಜನಿಕ ಆಸ್ತಿಗೆ ಹಾನಿಯಾಗದಂತೆ ನೋಡಿಕೊಳ್ಳಬೇಕು. ಶಾಂತಿಯುತ ಪ್ರತಿಭಟನೆ ಹತ್ತಿಕ್ಕಲು ಯಾರಿಂದಲೂ ಸಾಧ್ಯವಿಲ್ಲ. ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಿ ಎಂದು ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ