ಅಮೂಲ್ಯ ಪಾಕ್ ಪರ ಘೋಷಣೆ ಕೂಗಿದ ಬಗ್ಗೆ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದೇನು?

ಶುಕ್ರವಾರ, 21 ಫೆಬ್ರವರಿ 2020 (10:37 IST)
ರಾಮನಗರ : ಬೆಂಗಳೂರಿನಲ್ಲಿ ಅಮೂಲ್ಯ ಪಾಕ್ ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕ್ ಪರ ಘೋಷಣೆ ಕೂಗಿದ್ದು ಖಂಡನೀಯ. ಯಾರೇ ಆದರೂ ಇದನ್ನು ಖಂಡಿಸಬೇಕು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.


ರಾಮನಗರದಲ್ಲಿ ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಕಾರ್ಯಕ್ರಮ ಆಯೋಜಕರು ಎಚ್ಚರಿಕೆಯಿಂದ ಇರಬೇಕು. ಅಮೂಲ್ಯ ಉದ್ದೇಶಪೂರ್ವಕವಾಗಿ ಘೋಷಣೆ ಕೂಗಿದ್ದಾಳೋ? ಅಥವಾ ಪ್ರಚಾರಕ್ಕಾಗಿ ಘೋಷಣೆ ಕೂಗಿದ್ದಾಳೋ ತಿಳಿಯಬೇಕು. ಹೀಗೆ ಮಾತನಾಡುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಎಂದು ಹೇಳಿದ್ದಾರೆ. 


ಆ ಕಾರ್ಯಕ್ರಮದಲ್ಲಿ ನಮ್ಮ ಪಕ್ಷದವರು ಭಾಗಿಯಾಗಿದ್ದರು. ಆದರೆ ಅವರು ಪಾಕ್ ಪರ ಘೋಷಣೆ ಕೂಗಿದ್ದ ವೇಳೆ ಧಿಕ್ಕಾರ ಕೂಗಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ