ನಾಳೆಯಿಂದ ಕಾಲೇಜುಗಳ ಆರಂಭದ ಬಗ್ಗೆ ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ್ ಹೇಳಿದ್ದೇನು?
ಕಾಲೇಜು ಆರಂಭವಾದ ಬಳಿಕ ಸಮಸ್ಯೆಗಳು ಎದುರಾದರೆ ಸಮಸ್ಯೆ ಬಗೆಹರಿಸುವುದಕ್ಕೆ ಇಲಾಖೆಯಿಂದ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಕಾಲೇಜಿಗೆ ವಿದ್ಯಾರ್ಥಿಗಳು ಸ್ವ ಇಚ್ಚೆಯಿಂದ ಬರಬೇಕು. ಇದರ ಜತೆಗೆ ವಿದ್ಯಾರ್ಥಿಗಳು ಮುನ್ನೇಚ್ಚರಿಕೆ ವಹಿಸಬೇಕು. ಹಾಸ್ಟೆಲ್ ಗಳಲ್ಲಿಯೂ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ್ ಹೇಳಿದ್ದಾರೆ.