ಅಸಮಾಧಾನಗೊಂಡ ಶಾಸಕರ ಬಗ್ಗೆ ಈಶ್ವರಪ್ಪ ಹೇಳಿದ್ದೇನು?

ಬುಧವಾರ, 21 ಆಗಸ್ಟ್ 2019 (12:00 IST)
ಹುಬ್ಬಳ್ಳಿ : ಬಿಜೆಪಿ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಯಾಗಿದ್ದು, ಈ ಹಿನ್ನಲೆಯಲ್ಲಿ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಬಿಜೆಪಿಯ ಕೆಲವು ಶಾಸಕರು ಅಸಮಾಧಾನಗೊಂಡಿದ್ದಾರೆ.
ಈ ಬಗ್ಗೆ ಮಾತನಾಡಿದ ನೂತನ ಸಚಿವ ಕೆ.ಎಸ್. ಈಶ್ವರಪ್ಪ ಅವರು, ಸಚಿವ ಸ್ಥಾನ ಸಿಗದಿದ್ದದ್ದಕ್ಕೆ ಪಕ್ಷದಲ್ಲಿ ಕೆಲವರು ಅಸಮಾಧಾನಗೊಂಡಿರುವುದು ನಿಜ. ಪಕ್ಷದಲ್ಲಿ ಸಣ್ಣ ಪುಟ್ಟ ಸಮಸ್ಯೆಗಳು, ಅಸಮಾಧಾನ ಸಹಜ. ಶಾಸಕರ ಅಸಮಾಧಾನವನ್ನು ಬಗೆಹರಿಸುತ್ತೇವೆ ಎಂದು ಹೇಳಿದ್ದಾರೆ.


ಅಲ್ಲದೇ ಮೈತ್ರಿ ಸರ್ಕಾರ ಉರುಳಿಸಿ ಬಿಜೆಪಿ ಸರ್ಕಾರದ ರಚನೆಗೆ ಕಾಂಗ್ರೆಸ್-ಜೆಡಿಎಸ್ ನ ಕೆಲವು ಶಾಸಕರು ಬೆಂಬಲ ನೀಡಿದ್ದಾರೆ. ಅವರಿಗೂ ಕೆಲವು ಸಚಿವ ಸ್ಥಾನ ಮೀಸಲಿಟ್ಟಿದ್ದೇವೆ ಎಂಬುದಾಗಿ ಅವರು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ