ತಮ್ಮ ನಿವಾಸದಲ್ಲಿ ನಡೆದ ಶಾಸಕರ ಸಭೆ ಬಗ್ಗೆ ಜಗದೀಶ್ ಶೆಟ್ಟರ್ ಹೇಳಿದ್ದೇನು?

ಮಂಗಳವಾರ, 18 ಫೆಬ್ರವರಿ 2020 (10:34 IST)
ಬೆಂಗಳೂರು : ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ನಿವಾಸದಲ್ಲಿ ಸೋಮವಾರ ರಾತ್ರಿ ಬಿಜೆಪಿಯ ಕೆಲವು ಶಾಸಕರು ಸಭೆ ನಡೆಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ಈ ಸಭೆಯಲ್ಲಿ ಉಮೇಶ್ ಕತ್ತಿ, ಬಸವನಗೌಡ ಪಾಟೀಲ್ ಯತ್ನಾಳ್, ಮುರುಗೇಶ್ ನಿರಾಣಿ, ಶಿವನಗೌಡ ನಾಯಕ್ ಸೇರಿದಂತೆ ಹಲವು ಶಾಸಕರು ಸಭೆಯಲ್ಲಿ ಭಾಗವಹಿಸಿದ್ದರು. ಈ ಸಭೆಯನ್ನು ಭಿನ್ನಮತೀಯ ಚಟುವಟಿಕೆ ಎಂಬಂತೆ  ಕೆಲವರು ಬಿಂಬಿಸಿದ್ದಾರೆ.


ಆದರೆ ಇದೀಗ ಸಿಎಂ ಬಿಎಸ್ ವೈ ನಿವಾಸಕ್ಕೆ ಜಗದೀಶ ಶೆಟ್ಟರ್ ಭೇಟಿ ನೀಡಿ ತಮ್ಮ ನಿವಾಸದಲ್ಲಿ ನಡೆದ ಸಭೆ ಕುರಿತು ಸಿಎಂ ಗೆ  ಸೃಷ್ಟೀಕರಣ ನೀಡಿದ್ದಾರೆ. ಅಲ್ಲಿ ಯಾವುದೇ ರಾಜಕೀಯ ವಿಚಾರ ಚರ್ಚೆಯಾಗಿಲ್ಲ. ಕ್ಷೇತ್ರದ ಅಭಿವೃದ್ಧಿಯ ಕುರಿತು ಚರ್ಚಿಸಲು ಶಾಸಕರು ಬಂದಿದ್ದರು ಎಂದು ಸ್ಪಷ್ಟನೆ ನೀಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ