ರೈತ ಮಹಿಳೆ ಬಗ್ಗೆ ಅವಹೇಳನಕಾರಿ ಹೇಳಿಕೆ ವಿಚಾರ ; ಸಿಎಂ ಕುಮಾರಸ್ವಾಮಿ ಹೇಳಿದ್ದೇನು?

ಮಂಗಳವಾರ, 20 ನವೆಂಬರ್ 2018 (10:03 IST)
ಬೆಂಗಳೂರು : ರೈತ ಮಹಿಳೆ ಬಗ್ಗೆ ಅವಹೇಳನಕಾರಿ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ನಾನು ಮಹಿಳೆಗೆ ಅಪಮಾನ ಮಾಡಿದರೆ ಈ ಕ್ಷಣವೇ ರಾಜೀನಾಮೆ ನೀಡುತ್ತೇನೆ. ಹೆಣ್ಣುಮಗಳಿಗೆ ನೋವಾಗಿದ್ದರೆ ಪದ ವಾಪಸ್ ತೆಗೆದುಕೊಳ್ಳುತ್ತೇನೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.


ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾನು ಆ ಹೆಣ್ಣು ಮಗಳಿಗೆ ತಾಯಿ ಅಂತಾ ಪದ ಬಳಸಿದ್ದೇನೆ. ಅಲ್ಲ ತಾಯಿ ಇಷ್ಟು ದಿನ ಎಲ್ಲಿಗೆ ಹೋಗಿದ್ದೆ? ಎಲ್ಲಿ ಮಲಗಿದ್ದೇ ಅಂತಾ ಹೇಳಿದ್ದೆ.  ನಾನು ಕೆಟ್ಟ ಉದ್ದೇಶದಿಂದ, ಅಗೌರವ ಮಾಡಬೇಕು ಎಂಬ ಉದ್ದೇಶದಿಂದ ಮಾತನಾಡಿಲ್ಲ, ಆದರೆ ಇದನ್ನೇ ತಪ್ಪಾಗಿ ಅರ್ಥೈಸಲಾಗಿದೆ ಎಂದು ಹೇಳಿದ್ದಾರೆ.


ನಾನು ಮಹಿಳೆಯರಿಗೆ ಅಪಮಾನ ಮಾಡಿದೆ ಎಂದು ಹೇಳಿದರೆ ಒಂದು ಕ್ಷಣ ನಾನು ಈ ಸ್ಥಾನದಲ್ಲಿ ಇರುವುದಿಲ್ಲ. ನನ್ನ ವೈಯಕ್ತಿಕ ಜೀವನದ ಬಗ್ಗೆ ಚರ್ಚೆಗೂ ನಾನು ರೆಡಿ. ಒಳ್ಳೆ ಕೆಲಸ ಮಾಡುವುದು ತಪ್ಪೇ? ನಾನು ಏನು ತಪ್ಪು ಮಾಡಿದ್ದೇನೆ? ಆ ಮಹಿಳೆಗೆ ನೋವಾಗಿದ್ದರೆ ಆ ಪದವನ್ನು ವಾಪಸ್ ತೆಗೆದುಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.


ಮುಖ್ಯಮಂತ್ರಿಯಾಗಿ ನಾನು ಟಿಎ, ಡಿಎ ತೆಗೆದುಕೊಂಡಿಲ್ಲ. ಸರ್ಕಾರಿ ಬಂಗಲೆಯನ್ನು ನಾನು ಬಳಸುತ್ತಿಲ್ಲ. ಪೆಟ್ರೋಲ್ ಬಿಲ್ ತಗೊಂಡಿಲ್ಲ. ನಾನು ನಾಡಿನ ಜನರನ್ನು ರಕ್ಷಿಸಲು ಇಲ್ಲಿ ಕುಳಿತಿದ್ದೇನೆ. ನನ್ನ ಮೇಲೆ ಯಾಕೆ ಅನುಮಾನ, ಯಾಕೆ ಆಕ್ರೋಶ? 45 ಸಾವಿರ ಕೋಟಿ ಸಾಲಮನ್ನಾ ಮಾಡಿದ್ದಕ್ಕಾ ಎಂದು ಅವರು ಪ್ರಶ್ನಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ