ಧರ್ಮಸ್ಥಳ ನೀರಿನ ಸಮಸ್ಯೆಗೆ ಸ್ಪಂದಿಸಿದ ಕುಮಾರಸ್ವಾಮಿ ಮಾಡಿದ್ದೇನು?
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನೀರಿನ ತೀವ್ರ ಅಭಾವ ತಲೆದೋರಿರುವ ಕುರಿತು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಗಂಭೀರವಾಗಿ ಪರಿಗಣಿಸಿದ್ದಾರೆ.
ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಸಲಹೆಯಂತೆ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಅವರು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಅವರೊಂದಿಗೆ ಚರ್ಚಿಸಿದ್ದಾರೆ.
ಈ ಸಂದರ್ಭದಲ್ಲಿ ಸರ್ಕಾರದ ಕಳಕಳಿಗೆ ಕೃತಜ್ಞತೆ ವ್ಯಕ್ತಪಡಿಸಿದ ಹೆಗ್ಗಡೆಯವರು, ಇನ್ನೊಂದು ಚೆಕ್‍ಡ್ಯಾಂ ನಿರ್ಮಾಣದ ಅಗತ್ಯವಿದೆ ಎಂದು ತಿಳಿಸಿದರು. ಈ ಹಿನ್ನೆಲೆಯಲ್ಲಿ ಮುಖ್ಯ ಕಾರ್ಯದರ್ಶಿಗಳ ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲನೆಗಾಗಿ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಸ್ಥಳ ಪರಿಶೀಲನೆ ನಂತರ ಶೀಘ್ರವೇ ಚೆಕ್ ಡ್ಯಾಂ ನಿರ್ಮಾಣ ಕಾರ್ಯ ಆರಂಭಗೊಳ್ಳಲಿದೆ.