ಮೈಸೂರಿನಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳವಾದ ಬಗ್ಗೆ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದೇನು?
ಸೋಮವಾರ, 13 ಏಪ್ರಿಲ್ 2020 (09:54 IST)
ಮೈಸೂರು : ಮೈಸೂರಿನಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳವಾದ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಎಲ್ಲವೂ ಹತೋಟಿಯಲ್ಲಿ ಬಂದಿದೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೇಗೆ ಸೋಂಕು ಹರಡಿತು ಎಂಬ ಬಗ್ಗೆ ತನಿಖೆ ನಡೆಸುತ್ತೇನೆ. ರೈತರಿಗೆ ತೊಂದರೆ ಆಗದಂತೆ ಸಿಎಂ ಆದೇಶಿಸಿದ ಹಿನ್ನಲೆ ಕ್ರಮ ಕೈಗೊಳ್ಳುತ್ತೇನೆ. ಎಲ್ಲಾ ಮಾರುಕಟ್ಟೆಗಳಿಗೆ ಭೇಟಿ ನೀಡುತ್ತಿದ್ದೇನೆ. ರೈತರ ಸಮಸ್ಯೆ ಆಲಿಸಿ ಬಗೆಹರಿಸುತ್ತಿದ್ದೇನೆ. ಈಗಾಗಲೇ ತಾಲೂಕುಗಳಲ್ಲಿ ಪಾಸ್ ವ್ಯವಸ್ಥೆ ಮಾಡಿದ್ದೇನೆ ಎಂದು ತಿಳಿಸಿದ್ದಾರೆ.