ರಾಜ್ಯದಲ್ಲಿ ಮಧ್ಯಂತರ ಚುನಾವಣೆ ನಡೆಯುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?

ಸೋಮವಾರ, 24 ಜೂನ್ 2019 (12:37 IST)
ಮೈಸೂರು : ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಬರಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ಇತ್ತೀಚೆಗೆ ದೇವೇಗೌಡರು, ಮೈತ್ರಿ ಸರ್ಕಾರದಲ್ಲಿ ಎಲ್ಲವೂ ಸರಿ ಇಲ್ಲ ಇಲ್ಲ. ಆದಕಾರಣ ಮದ್ಯಂತರ ಚುನಾವಣೆ ನಡೆಯುವುದರಲ್ಲಿ ಯಾವುದೇ ಗೊಂದಲವಿಲ್ಲ ಎಂದು ಹೇಳಿದ್ದರು. ದೇವೇಗೌಡರ ಈ ಹೇಳಿಕೆಯನ್ನು ಕೇಳಿ ಬಿಜೆಪಿ ನಾಯಕರು ಮೈತ್ರಿ ಸರ್ಕಾರ ಬೀಳುವುದು ಖಚಿತ ಎಂದು ಹೇಳಿದ್ದರು.


ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಯಡಿಯೂರಪ್ಪ ಕನಸುಗಳಿಗೆ ಉತ್ತರ ನೀಡಲು ಆಗುವುದಿಲ್ಲ. ಬಹಳ ದಿನಗಳಿಂದ ಸರ್ಕಾರ ಬೀಳುತ್ತೆ ಎಂದು ಹೇಳುತ್ತಿದ್ದಾರೆ. ಆದರೆ ಯಡಿಯೂರಪ್ಪ ಹೇಳಿದ್ದು ಯಾವತ್ತು ನಿಜವಾಗಿಲ್ಲ. ಆದ್ದರಿಂದ ರಾಜ್ಯದಲ್ಲಿ  ಮಧ್ಯಂತರ ಚುನಾವಣೆ ಬರಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ