ಮೈತ್ರಿ ಸರ್ಕಾರ ಬೀಳುತ್ತೆ ಎಂಬ ಬಿಜೆಪಿ ಹೇಳಿಕೆಗೆ ಸಿದ್ದರಾಮಯ್ಯ ಹೇಳಿದ್ದೇನು ಗೊತ್ತಾ?

ಶನಿವಾರ, 8 ಡಿಸೆಂಬರ್ 2018 (12:06 IST)
ಬೆಂಗಳೂರು : ಮೈತ್ರಿ ಸರ್ಕಾರ ಬೀಳುತ್ತೆ ಎಂಬ ಬಿಜೆಪಿ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರ ಯಾವುದೇ ಕಾರಣಕ್ಕೂ ಬೀಳುವುದಿಲ್ಲ ಎಂದು ಬಿಜೆಪಿ ನಾಯಕರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ.


ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಬಿಜೆಪಿ ಹೇಳುತ್ತಲೇ ಇದೆ. ನಮ್ಮ ಸರ್ಕಾರ ಯಾವುದೇ ಕಾರಣಕ್ಕೂ ಬೀಳುವುದಿಲ್ಲ. ಬಿ.ಎಸ್.ಯಡಿಯೂರಪ್ಪಗೆ ವಯಸ್ಸಾಗಿದೆ. ಅವರಿಗೆ ಲೋಕಸಭೆ ಚುನಾವಣೆಗೂ ಮುನ್ನ ಸಿಎಂ ಆಗುವ ಬಯಕೆ ಇದೆ. ಅದು ಯಾವುದೇ ಕಾರಣಕ್ಕೂ ಸಾಧ್ಯವಿಲ್ಲ. ನಮ್ಮ ಸಮ್ಮಿಶ್ರ ಸರ್ಕಾರ ಸುಭದ್ರವಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿ ನಾಯಕರಿಗೆ ಖಡಕ್ ಆಗಿ ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ