ಜೆಡಿಎಸ್ ಬಗ್ಗೆ ಸುಮಲತಾ ಅಂಬರೀಶ್ ಹೇಳಿದ್ದೇನು?
ಶನಿವಾರ, 2 ಮಾರ್ಚ್ 2019 (19:54 IST)
ಮಂಡ್ಯ ಲೋಕಸಭೆ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸಲು ಆಸಕ್ತಿ ತೋರಿರುವ ಸುಮಲತಾ ಅಂಬರೀಶ್ ಬಿರುಸಿನ ಪ್ರಚಾರ, ಪ್ರವಾಸ ನಡೆಸುತ್ತಿದ್ದಾರೆ.
ನಟಿ ಸುಮಲತಾ ರಾಜಕೀಯ ಕ್ಷೇತ್ರಕ್ಕೆ ಧುಮುಕಿ ಸ್ಪರ್ಧೆ ಮಾಡಲು ನಿರ್ಧರಿಸಿದ್ದು, ಸುತ್ತೂರು ಶ್ರೀಕ್ಷೇತ್ರಕ್ಕೆ ಭೇಟಿ ನೀಡಿ ಸ್ವಾಮೀಜಿಯವರ ಆಶೀರ್ವಾದ ಪಡೆದರು.
ಶ್ರೀಕ್ಷೇತ್ರಕ್ಕೆ ಭೇಟಿ ನೀಡಿದ ಅವರು, ಸುತ್ತೂರು ಶ್ರೀಶಿವಕುಮಾರ ಸ್ವಾಮೀಜಿಯವರ ಆಶೀರ್ವಾದ ಪಡೆದು ಬಳಿಕ ಸ್ವಾಮೀಜಿಗಳೊಂದಿಗೆ ಉಭಯಕುಶಲೋಪರಿ ನಡೆಸಿದರು.
ಈ ಸಂದರ್ಭ ಮಾತನಾಡಿದ ಅವರು, ಸ್ವಾಮೀಜಿಯವರು ನಮ್ಮ ಕುಟುಂಬಕ್ಕೆ ಮೊದಲಿನಿಂದಲೂ ಪರಿಚಯ. ಹೀಗಾಗಿ ಇಂದು ಸ್ವಾಮೀಜಿಗಳನ್ನು ಭೇಟಿ ಮಾಡಿ ಆಶಿರ್ವಾದ ಪಡೆದಿದ್ದೇನೆ.
‘ಅಭಿ’ಯ ಸಿನಿಮಾದ ಬಗ್ಗೆ ಕೂಡ ಸ್ವಾಮೀಜಿ ಅವರೊಂದಿಗೆ ಮಾತನಾಡಿದ್ದೇನೆ. ಈಗ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆಯೂ ಚರ್ಚೆ ನಡೆಸಿದ್ದೇನೆ. ಜನರ ಅಭಿಪ್ರಾಯ ಸಂಗ್ರಹಿಸಲು ಮಂಡ್ಯ ಜಿಲ್ಲೆಯ ಪ್ರವಾಸ ಮಾಡುತ್ತಿದ್ದೇನೆ.
ಇಂದು ಕೂಡ ಕೆ.ಆರ್.ನಗರಕ್ಕೆ ಭೇಟಿ ನೀಡಲಿದ್ದೇನೆ. ರಾಜಕೀಯ ಬೆಳವಣಿಗೆ ನಿಮಗೆ ಗೊತ್ತಿದೆ. ಹಾಗಾಗಿ ಸದ್ಯಕ್ಕೆ ಏನೂ ಆಗಿಲ್ಲ. ಬೆಳವಣಿಗೆ ಇದ್ದರೆ ಮಾತನಾಡುತ್ತೇನೆ. ಜೆಡಿಎಸ್‌ನಿಂದ ನನ್ನ ಜೊತೆ ಯಾರೂ ಚರ್ಚೆ ನಡೆಸಿಲ್ಲ ಎಂದರು.